ಸಾಗರ:ಒಂದನೇ ತರಗತಿ ಓದುತ್ತಿದ್ದ 6 ವರ್ಷದ ಬಾಲಕ ಹೃದಯಾಘಾತದಿಂದ ಮೃತ ಪಟ್ಟ ಘಟನೆ ತಾಲ್ಲೂಕಿನ ಕರೂರು ಹೋಬಳಿಯಲ್ಲಿ ನಡೆದಿದೆ.
ಹಾಳಸಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ತ್ರಿಲೋಕ್ ಜೈನ್ (6) ಶನಿವಾರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕೊಡನವಳ್ಳಿ ಗ್ರಾಮದ ಗೌತಮ್ ಜೈನ್ ಹಾಗೂ ಶಿಲ್ಪಾ ದಂಪತಿ ಪುತ್ರ ತ್ರಿಲೋಕ್ ಜೈನ್ (6) ಮೃತ ವಿದ್ಯಾರ್ಥಿ. ಶನಿವಾರ ಮಧ್ಯಾಹ್ನ ಶಾಲೆ ಮುಗಿದ ನಂತರ ಮನೆಗೆ ತೆರಳುವಾಗ ಏಕಾಏಕಿ ಕುಸಿದು ಬಿದ್ದ ಬಾಲಕನನ್ನು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾನೆ.

ಪುತ್ರನನ್ನು ಕಳೆದುಕೊಂಡ ಕುಟುಂಬ ನೋವಿನಲ್ಲಿದೆ. ಗ್ರಾಮಸ್ಥರು, ಶಾಲಾಭಿವೃದ್ಧಿ ಸಮಿತಿ ಸದಸ್ಯರು, ಮುಖ್ಯ ಶಿಕ್ಷಕರು ಕಂಬನಿ ಮಿಡಿದಿದ್ದಾರೆ.
















