ಮನೆ ಶಿವಮೊಗ್ಗ ಶಿಕ್ಷಣದ ಜೊತೆಗೆ ಸಂಸ್ಕಾರವೂ ಅಗತ್ಯ:ಲೋಹಿತಾಶ್ವ

ಶಿಕ್ಷಣದ ಜೊತೆಗೆ ಸಂಸ್ಕಾರವೂ ಅಗತ್ಯ:ಲೋಹಿತಾಶ್ವ

42
0

ಆನಂದಪುರ:“ಯುವ ಪೀಳಿಗೆ ನಮ್ಮ ಇತಿಹಾಸ, ಸಂಸ್ಕೃತಿ ಹಾಗೂ ಮೌಲ್ಯಗಳನ್ನು ಅರಿತುಕೊಳ್ಳಬೇಕು. ಶಿಕ್ಷಣದ ಜೊತೆಗೆ ಸಂಸ್ಕಾರವೂ ಅಗತ್ಯ” ಎಂದು ವಕ್ತಾರರಾದ ಶಿವಮೊಗ್ಗ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಭಾಗದ ಮುಖ್ಯಸ್ಥ ಲೋಹಿತಾಶ್ವ ತಿಳಿಸಿದರು.

ಇವರು ಇಂದು ಆನಂದಪುರದಲ್ಲಿ ಹಮ್ಮಿಕೊಂಡಿದ್ದಂತಹ ಹಿಂದೂ ಸಮಾಜೋತ್ಸವ ಶೋಭಾಯಾತ್ರೆ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

“ಹಿಂದೂ ಸಮಾಜವು ಸಂಘಟಿತವಾಗಿದ್ದಾಗ ಮಾತ್ರ ನಮ್ಮ ಸಂಸ್ಕೃತಿ, ಧರ್ಮ ಹಾಗೂ ಪರಂಪರೆಯನ್ನು ಉಳಿಸಿಕೊಳ್ಳಲು ಸಾಧ್ಯ. ಸಮಾಜದಲ್ಲಿ ಭೇದಭಾವ, ವಿಭಜನೆಗೆ ಅವಕಾಶ ಕೊಡದೆ ಒಗ್ಗಟ್ಟಿನ ಶಕ್ತಿಯನ್ನು ಬೆಳೆಸಬೇಕು” ಎಂದು ಕರೆ ನೀಡಿದರು.

“ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿರುವ ಯುವಕರು ತಮ್ಮ ಮೂಲ ಸಂಸ್ಕೃತಿಯನ್ನು ಮರೆತರೆ ಭವಿಷ್ಯದಲ್ಲಿ ದೊಡ್ಡ ನಷ್ಟವಾಗಲಿದೆ. ಯುವಕರು ಸಮಾಜದ ನಾಯಕತ್ವ ವಹಿಸಿ “ನಮ್ಮ ಧರ್ಮವು ಮಾನವೀಯತೆ, ಸಹಬಾಳ್ವೆ ಮತ್ತು ಶಾಂತಿಯ ಸಂದೇಶ ನೀಡುತ್ತದೆ. ಇದನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ವಸುಧ ಡಿ ಪ್ರಭು ಮಾತನಾಡಿ “ಹಿಂದೂ ಸಮಾಜೋತ್ಸವವು ಕೇವಲ ಒಂದು ಕಾರ್ಯಕ್ರಮವಲ್ಲ, ಇದು ಸಮಾಜವನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಮಹತ್ವದ ಚಳವಳಿ. ದೇಶದ ಏಕತೆ ಮತ್ತು ಶಾಂತಿಗೆ ಹಿಂದೂ ಸಂಸ್ಕೃತಿ ಆಧಾರವಾಗಿದೆ” ಎಂದು ಅಭಿಪ್ರಾಯಪಟ್ಟರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಲಕ್ಷ್ಮಿ ರಂಗನಾಥ ಸ್ವಾಮಿಯ ಪ್ರದಾನ ಅರ್ಚಕ ವೆಂಕಟರಾಮ ಅಯ್ಯಂಗಾರ್, ರಾಷ್ಟ್ರೀಯ ಸ್ವಯಂಸೇವಕ ಸಂಘದ ಡಿ. ಹೆಚ್ ರಾಘವೇಂದ್ರ, ಸ್ಪೂರ್ತಿ ಇನ್ನಿತರರು ಉಪಸ್ಥಿತರಿದ್ದರು.

✒️…ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t