Home Shivamogga ಶಿವಮೊಗ್ಗ,ಗಾಂಧಿ ಬಜಾರ್ ಅಲ್ಲಿ ಹಾಡು ಹಗಲೇ ಬರ್ಬರ ಹತ್ಯೆ..!!

ಶಿವಮೊಗ್ಗ,ಗಾಂಧಿ ಬಜಾರ್ ಅಲ್ಲಿ ಹಾಡು ಹಗಲೇ ಬರ್ಬರ ಹತ್ಯೆ..!!

3
0

ಶಿವಮೊಗ್ಗ ನಗರದ ಗಾಂಧಿ ಬಜಾರ್ 1ನೇ ತಿರುವಿನಲ್ಲಿರುವ ಕರಿದೇವರ ಕೇರಿಯಲ್ಲಿ ರೌಡಿಶೀಟರ್ ಒಬ್ಬನನ್ನು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು Shivamogga ನಗರದ ಗೋವಿಂದಾಪುರ ಆಶ್ರಯ ಬಡಾವಣೆಯ ನಿವಾಸಿ ನರಸಿಂಹ (39) ಎಂದು ಗುರುತಿಸಲಾಗಿದೆ. ಇವರು ಸೀಗೆಹಟ್ಟಿ ನಿವಾಸಿಯಾಗಿದ್ದರೆಂದು ತಿಳಿದುಬಂದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳ ತಂಡವೊಂದು ಈ ಕೃತ್ಯವನ್ನು ಎಸಗಿರುವ ಶಂಕೆ ವ್ಯಕ್ತವಾಗಿದೆ.

ಗಂಭೀರವಾಗಿ ಗಾಯಗೊಂಡ ನರಸಿಂಹ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎ.ಜಿ. ಕಾರ್ಯಪ್ಪ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.