Home Shivamogga ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿ ನೇಣಿಗೆ ಶರಣು..!!

ಶಿವಮೊಗ್ಗ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿ ನೇಣಿಗೆ ಶರಣು..!!

33
0

ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿಯೊಬ್ಬರು ಪ್ಯಾಂಟ್ ಬಳಸಿ ಕಿಟಕಿಗೆ ನೇಣು ಬಿಗಿದುಕೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ಕಂಡು ಬಂದಿದೆ.

ಬೆಳಿಗ್ಗೆ ಎಂದಿನಂತೆ ಶೌಚಾಲಯ ಸ್ವಚ್ಛತಾ ಕಾರ್ಯಕ್ಕೆ ಸಿಬ್ಬಂದಿ ತೆರಳಿದ ವೇಳೆ ಶೌಚಾಲಯದ ಒಳಭಾಗದಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡಿರುವುದು ಕಂಡು ಬಂದಿದೆ. ತಕ್ಷಣವೇ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಮೃತರು ತಮ್ಮದೇ ಪ್ಯಾಂಟ್ ಅನ್ನು ಬಳಸಿ ಶೌಚಾಲಯದ ಕಿಟಕಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದು ಬಂದಿದೆ.

ಮೃತರನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊನ್ನಿಗನಹಳ್ಳಿ ಗ್ರಾಮದ ಮರಿಸ್ವಾಮಿ ಹೆಚ್.ಎಮ್. ಎಂದು ಗುರುತಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೃತರು ಶಿವಮೊಗ್ಗಕ್ಕೆ ಯಾವ ಕಾರಣಕ್ಕೆ ಬಂದಿದ್ದರು, ಆತ್ಮಹತ್ಯೆಗೆ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಜಾಹೀರಾತು: