ಶಿವಮೊಗ್ಗ:ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿನಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಸವಳಂಗ ರಸ್ತೆಯ ಕೊಮ್ಮನಾಳು ತಿರುವಿನ ಬಳಿ ಖಾಸಗಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲಿಯೇ ಮೃತ ಪಟ್ಟಿದ್ದು ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಹಳೇ ಜೋಗ ನಿವಾಸಿ ಶಿವಕುಮಾರ್ (32) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ಘಟನೆಯ ವಿವರ
ಭಾನುವಾರ ರಾತ್ರಿ ಸುಮಾರು 9:30ರ ವೇಳೆಗೆ ಶಿವಕುಮಾರ್ ಅವರು ಶಿವಮೊಗ್ಗದಿಂದ ತಮ್ಮ ಸ್ವಗ್ರಾಮ ಹಳೇ ಜೋಗಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದರು. ಈ ವೇಳೆ ಹೊನ್ನಾಳಿಯಿಂದ ಶಿವಮೊಗ್ಗದ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಕೊಮ್ಮನಾಳು ತಿರುವಿನಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಶಿವಕುಮಾರ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಈ ಕುರಿತು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













