ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ಅಶೋಕ್ ಬೇಳೂರು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಈ ಸಂಬಂಧ ರಾಜ್ಯದ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ನಿ., ಶಿವಮೊಗ್ಗ, ಇದರ ಆಡಳಿತ ಮಂಡಳಿಗೆ ಅಶೋಕ ಬೇಳೂರು ತಂದೆ ನಾಗಪ್ಪ, ಬೇಳೂರು ಗ್ರಾಮ, ಕಸಬಾ ಹೋಬಳಿ, ಸಾಗರ ತಾಲ್ಲೂಕು, ಶಿವಮೊಗ, ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









