ಹವಾಮಾನ ವರದಿ: ರಾಜ್ಯದ್ಯಂತ ಇವತ್ತೂ ಮಳೆ ಅಲರ್ಟ್ ಮುಂದುವರೆದಿದೆ. ಕರಾವಳಿ ಭಾಗದ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಉಳಿದ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಪ್ರಕಟಿಸಲಾಗಿದ್ದು, ಇನ್ನು ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ ಜೋರು ಮಳೆಯಾಗಿದೆ. ಇವತ್ತು ಯಲ್ಲೋ ಅಲರ್ಟ್ ಇದ್ದು ಅಲ್ಲಲ್ಲಿ ಸಾಧಾರಣದಿಂದ ಜೋರು ಮಳೆಯಾಗುವ ಸಾಧ್ಯತೆ ಇದೆ.
ಶಿವಮೊಗ್ಗ ಜಿಲ್ಲೆಗೆ ಹೊಂದಿಕೊಂಡಿರುವ ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಇದ್ದು ಆ ಭಾಗಕ್ಕೆ ಹೊಂದಿಕೊಂಡಿರವ ಶಿವಮೊಗ್ಗ ಜಿಲ್ಲೆಯ ವಿವಿಧ ಪ್ರದೇಶದಲ್ಲಿ ಭಾರಿ ಮಳೆಯಾಗಬಹುದಾಗಿದೆ.

ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ…?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ. ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗುಂಪನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









