ಮನೆ ಶಿವಮೊಗ್ಗ ಶಿವಮೊಗ್ಗ ಜಿಲ್ಲೆಗೆ ಮತ್ತೆ ಮಳೆ ಅಲರ್ಟ್‌, ಇವತ್ತು ಹೇಗಿದೆ ವಾತಾವರಣ? ಇಲ್ಲಿದೆ ಡಿಟೇಲ್ಸ್…!!

ಶಿವಮೊಗ್ಗ ಜಿಲ್ಲೆಗೆ ಮತ್ತೆ ಮಳೆ ಅಲರ್ಟ್‌, ಇವತ್ತು ಹೇಗಿದೆ ವಾತಾವರಣ? ಇಲ್ಲಿದೆ ಡಿಟೇಲ್ಸ್…!!

82
0

ಹವಾಮಾನ ವರದಿ:

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಮಳೆಯಾಗುತ್ತಿದೆ. ಇವತ್ತೂ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಭಾರತದ ಹಲವು ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್‌ ಘೋಷಿಸಲಾಗಿದೆ. ರಾಜ್ಯದ ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳು, ಉತ್ತರ ಒಳ ಕೆಲವು ಜಿಲ್ಲೆಗಳಿಗೆ ಅಲರ್ಟ್‌ ಪ್ರಕಟಿಸಲಾಗಿದೆ. ಶಿವಮೊಗ್ಗ ಜಿಲ್ಲೆಗು ಯಲ್ಲೋ ಅಲರ್ಟ್‌ ಇದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇವತ್ತು ಎಲ್ಲೆಲ್ಲಿ ಎಷ್ಟಿರುತ್ತೆ ತಾಪಮಾನ?ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 31 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ.

ಹೆಚ್ಚಿನ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t