Home Blog ಶಿವಮೊಗ್ಗ/ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸಂಯುಕ್ತ ಸಮಾರಂಭ, ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ..!!

ಶಿವಮೊಗ್ಗ/ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸಂಯುಕ್ತ ಸಮಾರಂಭ, ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ..!!

38
0

✒️..ಅಮಿತ್ ಆರ್ ಆನಂದಪುರ

ಶಿವಮೊಗ್ಗ, ಸೆ. 28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ 2025–26ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್‌ಎಸ್‌ಎಸ್‌, ಎನ್‌ಸಿಸಿ, ರೇಂಜರ್ಸ್‌, ಯುವ ರೆಡ್ ಕ್ರಾಸ್ ಸೇರಿದಂತೆ ವಿವಿಧ ವೇದಿಕೆಗಳ ಸಂಯುಕ್ತ ಸಮಾರಂಭ ಹಾಗೂ ತೃತೀಯ ವರ್ಷದ ಪದವಿ ವಿದ್ಯಾರ್ಥಿನಿಯರಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಪದವಿ ಪೂರ್ವ ಕಾಲೇಜಿನ ಸೈನ್ಸ್ ಮೈದಾನದ ಪ್ರಾಂಶುಪಾಲರಾದ ಕುಟ್ರೀ ಜಿ.ಎಫ್. ಉದ್ಘಾಟಿಸಿದರು. ವಿದ್ಯಾರ್ಥಿಗಳು ಶಿಸ್ತು ಮತ್ತು ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾರ್ಗದರ್ಶನ ನೀಡುವ ಉತ್ತಮ ಪ್ರಜೆಗಳಾಗಬೇಕು ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್, ವಿದ್ಯಾರ್ಥಿನಿಯರು ಸ್ಪರ್ಧಾತ್ಮಕ ಜಗತ್ತಿನಲ್ಲಿ ಶ್ರಮವಹಿಸಿ ಉನ್ನತ ಸ್ಥಾನಗಳನ್ನು ಅಲಂಕರಿಸಬೇಕು ಎಂದು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ರಂಗನಾಥ ಕರಾಡ್ ಅಧ್ಯಕ್ಷತೆ ವಹಿಸಿದ್ದರು. ಸಾಂಸ್ಕೃತಿಕ ಸಂಚಾಲಕರಾದ ಡಾ. ಜಗದೀಶ್ ಬೀದರಕೊಪ್ಪ ಪ್ರಾಸ್ತಾವಿಕ ಭಾಷಣ ಮಾಡಿದರು.

ಕ್ರೀಡಾ ಸಮಿತಿ ಸಂಚಾಲಕರಾದ ಡಾ. ವರದರಾಜ್ ಕಾರ್ಯಕ್ರಮ ನಿರ್ವಹಿಸಿದರು. ಪ್ರಾಧ್ಯಾಪಕರಾದ ಡಾ. ನವೀನ್, ಡಾ. ಬಸವಣ್ಣಪ್ಪ, ಮಹೇಂದ್ರ, ಉಮಾಶಂಕರ್, ಗ್ರಂಥಪಾಲಕ ಶಶಿಧರ್ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿನಿಯರು ಹಾಜರಿದ್ದರು.
ಸಮಾರಂಭದ ಅಂಗವಾಗಿ ವಿವಿಧ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು. ತೃತೀಯ ವರ್ಷದ ವಿದ್ಯಾರ್ಥಿನಿಯರಿಗೆ ಭಾವುಕವಾಗಿ ಬೀಳ್ಕೊಡುಗೆ ನೀಡಲಾಯಿತು.