ಮನೆ ಶಿವಮೊಗ್ಗ ಶಿವಮೊಗ್ಗ/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ಸಂದರ್ಶನ..!!

ಶಿವಮೊಗ್ಗ/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ನೇರ ಸಂದರ್ಶನ..!!

28
0

ಶಿವಮೊಗ್ಗ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನದ ಬ್ಯಾಕೋಡು, ತುಮರಿ, ಆವಿನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗಳಿಗೆ ತಾತ್ಕಾಲಿಕ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಲು ಅರ್ಹ ಎಂ.ಬಿ.ಬಿ.ಎಸ್. ಪದವೀಧರರಿಂದ ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವರ್ಷದ ಅವಧಿಗೆ ರೋಸ್ಟರ್ ಹಾಗೂ ಮೆರಿಟ್ ಆಧಾರದಲ್ಲಿ ನೇಮಕ ನಡೆಯಲಿದ್ದು, ಆಸಕ್ತರು ಫೆ. 6ರಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 1ರವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ, ಬಿ.ಎಚ್‌. ರಸ್ತೆ, ಶಿವಮೊಗ್ಗ ಇಲ್ಲಿ ತಮ್ಮ ವಿದ್ಯಾರ್ಹತೆ, ಜನ್ಮ ದಿನಾಂಕ ಮತ್ತು ಮೀಸಲಾತಿಗೆ ಸಂಬಂಧಿಸಿದ ಎಲ್ಲ ದಾಖಲೆಗಳ ಒಂದು ಪ್ರತಿ ನಕಲು ಮತ್ತು ಮೂಲ ಪ್ರತಿಗಳು ಮತ್ತು ಇತ್ತೀಚಿನ ಎರಡು ಭಾವಚಿತ್ರಗಳೊಂದಿಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಮಾಹಿತಿಗೆ ದೂರವಾಣಿ:08182-222382 ಸಂಪರ್ಕಿಸಿ.

✒️…ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ