Home ರಾಜ್ಯ ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಲು ಸಿದ್ಧವಾದ ಬೇಳೂರು ಗೋಪಾಲಕೃಷ್ಣ..!!

ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಲು ಸಿದ್ಧವಾದ ಬೇಳೂರು ಗೋಪಾಲಕೃಷ್ಣ..!!

40
0

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಅಂಗವಾಗಿ 20 ನೂತನ ಸಚಿವರ ಪಟ್ಟಿಯನ್ನು ಬಿಡುಗಡೆ ಮಾಡಿದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದೊಳಗೆ ಸಚಿವ ಸ್ಥಾನದ ಆಕಾಂಕ್ಷಿಗಳ ಅಸಮಾಧಾನ ಬಹಿರಂಗವಾಗತೊಡಗಿದೆ. ಈ ಬೆಳವಣಿಗೆಯ ನಡುವೆಯೇ ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ರಾಜೀನಾಮೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಗೋಪಾಲಕೃಷ್ಣ ಬೇಳೂರು, ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಹಾಗೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಹಾಗೂ ಪ್ರಭಾವಿ ನಾಯಕರಿಗೆ ಮಾತ್ರ ಸೂಕ್ತ ಸ್ಥಾನಮಾನ ನೀಡಲಾಗುತ್ತಿದೆ ಎಂದು ಆರೋಪಿಸಿದರು.

“ನಾನು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಪಕ್ಷ ಸಂಘಟನೆಗಾಗಿ ನಿರಂತರವಾಗಿ ದುಡಿದಿದ್ದರೂ ಸಚಿವ ಸ್ಥಾನ ನೀಡದೆ ನನಗೆ ಅನ್ಯಾಯ ಮಾಡಲಾಗಿದೆ. ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತರು ಹಾಗೂ ಹಿರಿಯ ನಾಯಕರಿಗಿಂತ ಪ್ರಭಾವಿ ಕುಟುಂಬಗಳಿಗೆ ಮಾತ್ರ ಆದ್ಯತೆ ನೀಡಲಾಗುತ್ತಿದೆ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೇ ವೇಳೆ, ಆಗಸ್ಟ್ 4ರಂದು ಬೆಳಿಗ್ಗೆ 10 ಗಂಟೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಘೋಷಣೆ ಮಾಡಿದ್ದು, ನನ್ನ ಜೊತೆ ಇನ್ನು ಹಲವು ರಾಜಕೀಯ ನಾಯಕರು ರಾಜೀನಾಮೆ ಕೊಡಲು ಸಿದ್ಧರಾಗಿದ್ದಾರೆ. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಗೋಪಾಲಕೃಷ್ಣ ಬೇಳೂರು ಅವರ ಈ ಘೋಷಣೆಯಿಂದ ಕಾಂಗ್ರೆಸ್ ಪಕ್ಷದೊಳಗಿನ ಅಸಮಾಧಾನ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದ್ದು, ಮುಂದಿನ ರಾಜಕೀಯ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.