✒️..ಅಮಿತ್ ಆರ್ ಆನಂದಪುರ
ಶಿವಮೊಗ್ಗ: ಸಾಗರ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ (ಎಎಸ್ಪಿ) ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಬೆನಕ ಪ್ರಸಾದ್ ಎನ್. ಜೆ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಶಿವಮೊಗ್ಗ (ಎ) ಉಪವಿಭಾಗದ ಎಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
೨೦೨೨ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಡಾ. ಬೆನಕ ಪ್ರಸಾದ್ ಅವರು ಸಾಗರ ಉಪವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಸದ್ಯ ತೆರವಾಗಿದ್ದ ಶಿವಮೊಗ್ಗ ನಗರ (ಎ) ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕ ಹುದ್ದೆಗೆ ಮುಂದಿನ ಆದೇಶದವರೆಗೆ ಇವರನ್ನು ನಿಯೋಜಿಸಲಾಗಿದೆ.
ರಾಜ್ಯಪಾಲರ ಆದೇಶದ ಮೇರೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (DPAR) ಸರ್ಕಾರದ ಅಧೀನ ಕಾರ್ಯದರ್ಶಿ ಸಂಜಯ್ ಬಿ. ಎಸ್. ಈ ಪ್ರಕಟಣೆ ಹೊರಡಿಸಿದ್ದಾರೆ.
















