Home Shivamogga Sagara ಸಾಗರ ತಾಲೂಕಿನಲ್ಲಿ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ: ತಹಶೀಲ್ದಾರ್ ಆದೇಶ..!!

ಸಾಗರ ತಾಲೂಕಿನಲ್ಲಿ ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ: ತಹಶೀಲ್ದಾರ್ ಆದೇಶ..!!

79
0


ಸಾಗರ, ಜು. 7: ಸಾಗರ ತಾಲೂಕಿನಲ್ಲಿ ನಿರಂತರ ಮಳೆ ಹಾಗೂ ಹವಾಮಾನ ವೈಪರೀತ್ಯದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 8, 2026 (ಬುಧವಾರ) ರಂದು ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ ಹಾಗೂ ಅನುದಾನಿತ ,ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಪದವಿಪೂರ್ವ ಕಾಲೇಜುಗಳು ಮತ್ತು ಡಿಪ್ಲೊಮಾ ಕಾಲೇಜುಗಳಿಗೆ ಒಂದು ದಿನದ ರಜೆಯನ್ನು ಘೋಷಿಸಿ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಮತ್ತು ಗಾಳಿಯಿಂದ ವಿದ್ಯಾರ್ಥಿಗಳ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.


ತಹಶೀಲ್ದಾರ್ ಅವರು ಸಾರ್ವಜನಿಕರಿಗೆ ಅಗತ್ಯವಿಲ್ಲದೆ ಹೊರಗೆ ಸಂಚರಿಸದಂತೆ, ನದಿ, ಹಳ್ಳ, ತಗ್ಗು ಪ್ರದೇಶಗಳಿಗೆ ತೆರಳದಂತೆ ಹಾಗೂ ಮಕ್ಕಳ ಸುರಕ್ಷತೆಗೆ ವಿಶೇಷ ಗಮನ ಹರಿಸುವಂತೆ ಮನವಿ ಮಾಡಿದ್ದಾರೆ. ಸಂಬಂಧಿತ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.