Home Shivamogga Sagara ಸಾಗರ/ ಹೊಸಂತೆ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ದಾಖಲಾತಿ ಜಾಗೃತಿ ಅಭಿಯಾನ..!!

ಸಾಗರ/ ಹೊಸಂತೆ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ದಾಖಲಾತಿ ಜಾಗೃತಿ ಅಭಿಯಾನ..!!

30
0

✒️..ಅಮಿತ್ ಆರ್ ಆನಂದಪುರ

ಸಾಗರ, ಜೂನ್ 5: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲ್ಲೂಕಿನ ಹಿರೇ ಬೀಲಗುಂಜಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಸರ್ಕಾರಿ ಶಾಲಾ ದಾಖಲಾತಿ ಜಾಗೃತಿ ಕಾರ್ಯಕ್ರಮವನ್ನು ಗುರುವಾರ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಾಲಾ ಆವರಣದಲ್ಲಿ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರಿಗೆ ಅರಿವು ಮೂಡಿಸಲಾಯಿತು. ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಮುಂದಿನ ಪೀಳಿಗೆಗೆ ಉತ್ತಮ ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದು ಶಾಲೆಯ ಮುಖ್ಯೋಪಾಧ್ಯಾಯ ಗಣೇಶ್ ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ವಿಶೇಷ ದಾಖಲಾತಿ ಅಭಿಯಾನ ನಡೆಸಲಾಯಿತು. ‘ಸರ್ಕಾರಿ ಕೆಲಸ ಬೇಕು, ಸರ್ಕಾರಿ ಶಾಲೆ ಬೇಡ’ ಎಂಬ ಮನೋಭಾವವನ್ನು ತೊರೆದು, ಸರ್ಕಾರಿ ಶಾಲೆಗಳಲ್ಲಿನ ಗುಣಮಟ್ಟದ ಶಿಕ್ಷಣ ಹಾಗೂ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಇದೇ ಸಂದರ್ಭದಲ್ಲಿ ಹೊಸದಾಗಿ ಒಂದನೇ ತರಗತಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಅಕ್ಷರಾಭ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳುವ ಮೂಲಕ ಶಿಕ್ಷಣದ ಪಯಣಕ್ಕೆ ಶುಭಾರಂಭ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಪೋಷಕರಾದ ಜಗದೀಶ್, ಮೀನಂಕ್ ಆರ್.ಜೆ., ಹರೀಶ್ ಜೋಗುಳೇಕರ್, ಆಕಾಶ್ ಖಂಡೋಜಿ ಮತ್ತು ನವೀನ್, ಶಿಕ್ಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.