✒️..ಅಮಿತ್ ಆರ್ ಆನಂದಪುರ
ಬೆಂಗಳೂರು: ನೂತನವಾಗಿ ಲೋಕಾರ್ಪಣೆಯಾಗಿರುವ ಸಿಗಂದೂರು ಸೇತುವೆ ಬಳಿ ಪ್ರವಾಸಿಗರಿಗೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಪ್ರವಾಸೋದ್ಯಮ ಸಚಿವ ಡಾ. ಎಚ್. ಕೆ. ಪಾಟೀಲ್ ಅವರಿಗೆ ಮನವಿ ಮಾಡಿದ್ದಾರೆ.
ವಿಧಾನಸೌಧದಲ್ಲಿ ಕಾನೂನು, ನ್ಯಾಯ, ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು, ಶಾಸನ ರಚನೆ ಕುರಿತು ಪ್ರವಾಸೋದ್ಯಮ ಸಚಿವ ಡಾ. ಎಚ್. ಕೆ. ಪಾಟೀಲ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ, ಸಿಗಂದೂರು ಸೇತುವೆ ಪ್ರದೇಶದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಿದರು.

ಸಿಗಂದೂರು ಸೇತುವೆ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸೋದ್ಯಮ ಇಲಾಖೆಯಿಂದ ಬೋಟ್ ವ್ಯವಸ್ಥೆ, ಹೋಟೆಲ್ ನಿರ್ಮಾಣ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.














