ಸಾಗರ ತಾಲೂಕಿನ ಆನಂದಪುರದ ಯಡೇಹಳ್ಳಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸುರೇಶ್ ಸಹಾನೆ ಅವರ ಅಧ್ಯಕ್ಷತೆಯಲ್ಲಿ 2026–27ನೇ ಸಾಲಿನ ಮೀನುಗಾರಿಕೆ ಹಕ್ಕು ನೀಡುವ ಉದ್ದೇಶದಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ 20 ಕೆರೆಗಳ ಬಹಿರಂಗ ಹರಾಜು ಗುರುವಾರ ನಡೆಯಿತು.
ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಶ್ ಕೆ.ಎಸ್. ಮಾಹಿತಿ ನೀಡಿ, ಗ್ರಾಮಸ್ಥರ ಸಮ್ಮುಖದಲ್ಲಿ ನಿಯಮಾನುಸಾರ ಹಾಗೂ ಪಾರದರ್ಶಕವಾಗಿ ಹರಾಜು ಪ್ರಕ್ರಿಯೆ ನಡೆಸಲಾಯಿತು.

ಒಟ್ಟು 20 ಕೆರೆಗಳ ಪೈಕಿ 12 ಕೆರೆಗಳ ಹರಾಜು ಪೂರ್ಣಗೊಂಡಿದ್ದು, ಇದರಿಂದ ಗ್ರಾಮ ಪಂಚಾಯತ್‌ಗೆ ₹2,17,500 ಆದಾಯ ಬಂದಿದೆ. ಉಳಿದ 8 ಕೆರೆಗಳನ್ನು ಮೇಲಾಧಿಕಾರಿಗಳ ಮಾರ್ಗದರ್ಶನದಂತೆ ಮುಂದಿನ ದಿನಗಳಲ್ಲಿ ಮತ್ತೊಮ್ಮೆ ಬಹಿರಂಗ ಹರಾಜಿಗೆ ಕರೆಯಲಾಗುವುದು ಎಂದು ಹೇಳಿದರು.
ಆಡಳಿತಾಧಿಕಾರಿ ಸುರೇಶ್ ಸಹಾನೆ ಮಾತನಾಡಿ, ಹರಾಜು ಪ್ರಕ್ರಿಯೆಯನ್ನು ಯಾವುದೇ ಗೊಂದಲಕ್ಕೆ ಅವಕಾಶ ನೀಡದೇ, ಗ್ರಾಮಸ್ಥರ ಸಮ್ಮುಖದಲ್ಲಿ ಸಂಪೂರ್ಣ ಪಾರದರ್ಶಕವಾಗಿ ನಡೆಸಲಾಗಿದೆ ಎಂದು ತಿಳಿಸಿದರು.
ಹರಾಜು ಪ್ರಕ್ರಿಯೆಯಲ್ಲಿ ಗ್ರಾಮಸ್ಥರು, ಆಸಕ್ತ ಗುತ್ತಿಗೆದಾರರು ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಪಾಲ್ಗೊಂಡಿದ್ದರು.
ಜಾಹೀರಾತು












