ಮನೆ ಶಿವಮೊಗ್ಗ ಸೆಪ್ಟೆಂಬರ್ 22 ರಿಂದ ಸಿಗಂದೂರು ನವರಾತ್ರಿ ಉತ್ಸವ..

ಸೆಪ್ಟೆಂಬರ್ 22 ರಿಂದ ಸಿಗಂದೂರು ನವರಾತ್ರಿ ಉತ್ಸವ..

201
0

ಸಾಗರ:

ನಾಡಿನ ಪ್ರಸಿದ್ಧ ಶಕ್ತಿ ದೇವತೆ ಸಾಗರ ತಾಲ್ಲೂಕಿನ ಸಿಗಂದೂರು ಚೌಡಮ್ಮ ದೇವಸ್ಥಾನದಲ್ಲಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ನವರಾತ್ರಿ ಉತ್ಸವ ನೆಡೆಯಲಿದೆ ಎಂದು ದೇವಳ ಆಡಳಿತ ಮಂಡಳಿ ತಿಳಿಸಿದೆ.

ಪ್ರತಿದಿನ ಮುಂಜಾನೆ ದೇವಿಗೆ ಪ್ರಾತಕಾಲ ಪೂಜೆ, ತೈಲಾಭಿಷೇಕ, ಶೈಲಪುತ್ರಿ ಆರಾಧನೆ, ಶುದ್ದಿ ಪುಣ್ಯಾಹ,ಗಣಹೋಮ, ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕ, ವಿವಿಧ ಧ್ರವ್ಯಗಳಿಂದ ಅಭಿಷೇಕ, ಮಹಾಭಿಷೇಕ, ಅಲಂಕಾರ ಪೂಜೆ ನೆಡೆಯಲಿದೆ.

ನವರಾತ್ರಿ ಉತ್ಸವದ ಪ್ರಯುಕ್ತ ದೇವಿಗೆ ಪ್ರತಿನಿತ್ಯ ದುರ್ಗಾ ಹವನ, ಚಂಡಿಕಾ ಹೋಮ, ನವಚಂಡಿಕಾ ಹೋಮ, ಗುರುಗಳ ಆರಾಧನೆ ನೆಡೆಯಲಿದೆ. ಪ್ರತಿನಿತ್ಯ ಮಧ್ಯಾಹ್ನ 12:30ಕ್ಕೆ ನೈವೇದ್ಯ, ರಾತ್ರಿ 7:30 ರಿಂದ ದೀಪೋತ್ಸವ, 8ರಿಂದ ಅಷ್ಟಾವಧಾನ ಸೇವೆ, ಮಹಾ ಮಂಗಳಾರತಿ ನೆಡೆಯಲಿದೆ. ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳು ಅನುವಂಶಿಕ ಧರ್ಮಾಧಿಕಾರಿ ಎಸ್ ರಾಮಪ್ಪನವರ ನೇತೃತ್ವದಲ್ಲಿ ನಡೆಯಲಿದೆ.

ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ನೆಡೆಯಲಿದೆ. ನವರಾತ್ರಿ ಸಂದರ್ಭದಲ್ಲಿ ಭಕ್ತಾದಿಗಳಿಗೆ ವಸತಿ, ದರ್ಶನ, ನಿತ್ಯ ಪೂಜೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ದೇವಸ್ಥಾನದ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಎಚ್ ಆರ್ ತಿಳಿಸಿದ್ದಾರೆ.

ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t