ಹವಾಮಾನ ವರದಿ: ರಾಜ್ಯಾದ್ಯಂತ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಲ್ಲಿ ಚದುರಿದಂತೆ ಮಳೆ ಸುರಿಯಬಹುದು ಎಂದು ನಿರೀಕ್ಷಿಸಲಾಗಿದೆ.
ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿಯು ವಿವಿಧೆಡೆ ಸಾಧಾರಣ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ. ಶಿವಮೊಗ್ಗದಲ್ಲಿ ಇವತ್ತು ಮೋಡ ಕವಿದ ವಾತಾವರಣ ಇರಲಿದೆ. ಇದರ ಮಧ್ಯೆ ಬಿಸಿಲಿನ ಅಬ್ಬರವು ಇರುವ ಕುರಿತು ಅಂದಾಜಿಸಲಾಗಿದೆ.

ಶಿವಮೊಗ್ಗದಲ್ಲಿ ಹೇಗಿದೆ ವಾತಾವರಣ?
ಶಿವಮೊಗ್ಗ, ಭದ್ರಾವತಿ ತಾಲೂಕುಗಳಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ತೀರ್ಥಹಳ್ಳಿಯಲ್ಲಿ ಇವತ್ತು ಗರಿಷ್ಠ 30 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.ಸಾಗರ, ಹೊಸನಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಗರಿಷ್ಠ 32 ಡಿಗ್ರಿ ಸೆಲ್ಸಿಯಸ್, ಕನಿಷ್ಠ 24 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









