ಮನೆ Blog ಹಿರಿಯ ಯಕ್ಷಗಾನ ಭಾಗವತ ‘ದಿನೇಶ್ ಅಮ್ಮಣ್ಣಾಯ’ ಇನ್ನಿಲ್ಲ…

ಹಿರಿಯ ಯಕ್ಷಗಾನ ಭಾಗವತ ‘ದಿನೇಶ್ ಅಮ್ಮಣ್ಣಾಯ’ ಇನ್ನಿಲ್ಲ…

103
0

ಯಕ್ಷಗಾನ ಹಿರಿಯ ಭಾಗವತ ಗಾನ ಕೋಗಿಲೆ ದಿನೇಶ್ ಅಮ್ಮಣ್ಣಾಯ(65) ಅವರು ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರುಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ.

ತೆಂಕುತಿಟ್ಟು ಯಕ್ಷಗಾನ ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ‘ರಸರಾಗ ಚಕ್ರವರ್ತಿ’ ಎಂಬ ಬಿರುದು ಹೊಂದಿದ್ದರು.

ತಮ್ಮ ಕಂಚಿನ ಕಂಠ ಹಾಗೂ ವಿಶಿಷ್ಟ ರಾಗ ಸಂಯೋಜನೆಯ ಮೂಲಕ ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕಲಾ ಸೇವೆಯಲ್ಲಿ ತೊಡಗಿಸಿಕೊಂಡಿದ್ದರು. ಅವರ ಅಗಲಿಕೆಯಿಂದ ಯಕ್ಷಗಾನ ಲೋಕಕ್ಕೆ ಭಾರಿ ನಷ್ಟವಾಗಿದೆ.

ವರದಿ ತಾರಾ ಕೆ.ಎಸ್

ಹೆಚ್ಚಿನ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t