ಹೊಸನಗರ: ದಾವಣಗೆರೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಖಾಸಗಿ ಬಸ್ ಹುಲಿಕಲ್ ಘಾಟಿಯ ಧರೆಗೆ ಗುದ್ದಿದ ಪರಿಣಾಮ ಮಗುವೊಂದು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಸೋಮವಾರ (ಡಿ.29) ತಡರಾತ್ರಿ ನಡೆದಿದೆ.
ನಿದ್ದೆಯ ಮಂಪರು, ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ನಡೆದಿದೆ ಎನ್ನಲಾಗಿದ್ದು. ಘಟನೆಯಲ್ಲಿ ಗಂಭೀರ ಗಾಯಗೊಂಡ ಶರೀಫಾಬಿ (57), ಇಮಾಮ್ ಸಾಬ್ (73), ಸಫಾನ (28) ಎಂಬುವರನ್ನು ಉಡುಪಿ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯಲ್ಲಿ ಖಾಸಗಿ ಬಸ್ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ಲಭ್ಯವಾಗಬೇಕಿದೆ.
ಘಟನಾ ಸ್ಥಳಕ್ಕೆ ನಗರ ಪೊಲೀಸರು ಧಾವಿಸಿದ್ದು ಪ್ರಾಥಮಿಕ ಮಾಹಿತಿ ಸಂಗ್ರಹಿಸಿದ್ದಾರೆ. ಮಂಗಳವಾರ ಮುಂಜಾನೆ ಪೊಲೀಸ್ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









