ಮನೆ ರಾಜ್ಯ ಹುಲಿಕಲ್ ಘಾಟಿ ಘೋರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದು ತಿಳಿಸಿದ್ದೇನು..?

ಹುಲಿಕಲ್ ಘಾಟಿ ಘೋರ ದುರಂತದ ಬಗ್ಗೆ ಮುಖ್ಯಮಂತ್ರಿ ಸಿದ್ದು ತಿಳಿಸಿದ್ದೇನು..?

20
0

✒️…ಅಮಿತ್ ಆರ್ ಆನಂದಪುರ

ಶಿವಮೊಗ್ಗ ಜಿಲ್ಲೆ ಹೊಸನಗರ ತಾಲ್ಲೂಕಿನ ಹುಲಿಕಲ್ ಘಾಟಿ ತಿರುವಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಯಿತು.

ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ಸದಸ್ಯರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಘಟನೆ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರೊಂದಿಗೆ ಮಾತುಕತೆ ನಡೆಸಿ, ಮಾಹಿತಿ ಪಡೆದಿದ್ದೇನೆ. ಕುಟುಂಬಕ್ಕೆ ಆಧಾರವಾಗಿದ್ದ ದುಡಿಯುವ ಜೀವಗಳು ಈ ಘಟನೆಯಲ್ಲಿ ಬಲಿಯಾಗಿದ್ದು, ಮಾನವೀಯ ನೆಲೆಯಲ್ಲಿ ಮೃತ ಕಾರ್ಮಿಕರ ಕುಟುಂಬಕ್ಕೆ ತಲಾ ರೂ.5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಮ್ಮ X ಖಾತೆಯಲ್ಲಿ ಹಾಗೂ ಫೇಸ್ಬುಕ್ ಅಲ್ಲಿ ಹಂಚಿಕೊಂಡಿದ್ದಾರೆ.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t