✒️..ಅಮಿತ್ ಆರ್ ಆನಂದಪುರ
ಆನಂದಪುರ: “ಹೆಲ್ಮೆಟ್ ಧರಿಸಿದರೆ ಇಂತಹ ದುರ್ಘಟನೆಗಳನ್ನು ತಪ್ಪಿಸಬಹುದು. ಎಲ್ಲರೂ ಕಡ್ಡಾಯವಾಗಿ ಹೆಲ್ಮೆಟ್ ಹಾಕಿಕೊಳ್ಳಬೇಕು,” ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಸಾರ್ವಜನಿಕರಿಗೆ ಕಳಕಳಿಯಿಂದ ಮನವಿ ಮಾಡಿದರು.
ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹೇಶ್ ಅವರ ಪಾರ್ಥಿವ ಶರೀರವನ್ನು ಆನಂದಪುರ ಸರ್ಕಾರಿ ಆಸ್ಪತ್ರೆಗೆ ಇರಿಸಲಾಗಿತ್ತು. ಈ ವೇಳೆ ಸ್ಥಳಕ್ಕೆ ಭೇಟಿ ನೀಡಿದ ಅವರು ಮೃತದೇಹವನ್ನು ನೋಡಿ ಭಾವುಕರಾಗಿ ಸಾಂತ್ವನ ಸೂಚಿಸಿ ವೈಯಕ್ತಿಕ ಧನಸಹಾಯ ನೀಡಿ ಮಾತನಾಡಿದರು.

ಇಂತಹ ವಾಹನ ಚಾಲನೆ ಮಾಡುವಾಗ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತ್ಯಂತ ಅಗತ್ಯವಾಗಿದೆ. ವಿಶೇಷವಾಗಿ ಬೈಕ್ ಸವಾರರು ಹೆಲ್ಮೆಟ್ ಧರಿಸುವ ಮೂಲಕ ತಮ್ಮ ಜೀವವನ್ನು ರಕ್ಷಿಸಿಕೊಳ್ಳಬಹುದು ಎಂದು ಅವರು ತಿಳಿಸಿದರು.
ಇಂತಹ ದುರ್ಘಟನೆಗಳು ಮತ್ತೊಬ್ಬರ ಜೀವನದಲ್ಲಿ ಮರುಕಳಿಸದಂತೆ ಎಲ್ಲರೂ ಜಾಗೃತರಾಗಬೇಕು ಎಂದು ಕರೆ ನೀಡಿದರು.

ಇದೇ ವೇಳೆ ಅಪಘಾತದ ಸಂದರ್ಭ 108 ಆಂಬುಲೆನ್ಸ್ ಸೇವೆ ಸಮರ್ಪಕವಾಗಿ ಸ್ಪಂದಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದ್ದು, ಇದರ ಬಗ್ಗೆ ಪರಿಶೀಲನೆ ನಡೆಸಿ ಸಂಬಂಧಪಟ್ಟವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









