ಆನಂದಪುರ: ಸಮೀಪದ ಗೌತಮಪುರದ ವಿದ್ಯಾಭಾರತಿ ಹಾಗೂ ಜಿ.ಆರ್. ಮೆಮೋರಿಯಲ್ ಹೈ ಸ್ಕೂಲ್‌ನಲ್ಲಿ ಭಾರತದ 76ನೇ ಗಣರಾಜ್ಯೋತ್ಸವವನ್ನು ಭಕ್ತಿಭಾವದಿಂದ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಿವೃತ್ತ ಭೂ ದಾಖಲೆಗಳ ಸಹಾಯಕ ನಿರ್ದೇಶಕರಾದ ಸುಬ್ಬಪ್ಪ ಎನ್., ನರಸೀಪುರ ಅವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಭಾರತ ಸಂವಿಧಾನವು ಪ್ರಜಾಪ್ರಭುತ್ವ, ಸಮಾನತೆ ಮತ್ತು ಸ್ವಾತಂತ್ರ್ಯದ ಆಧಾರವಾಗಿದ್ದು, ಅದರ ಮೌಲ್ಯಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಶಾಲಾ ಕಾರ್ಯದರ್ಶಿಯಾದ ಶ್ರೀಮತಿ ನಾಗರತ್ನ ಅವರು ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು, ದೇಶಭಕ್ತಿ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ ನಡೆದು ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ರಾಷ್ಟ್ರಗೀತೆ ಮತ್ತು ದೇಶಭಕ್ತಿಗೀತೆಗಳ ಮೂಲಕ ಗಣರಾಜ್ಯೋತ್ಸವದ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿದರು.
✒️..ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಾಪ್ ಕೇರಳ ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









