ಮನೆ Blog 🗳️🇮🇳 ಮತದಾನವು ಪ್ರಜಾಪ್ರಭುತ್ವದ ಮೂಲ ಶಕ್ತಿ: ಡಾ. ಕೆ. ಪ್ರಭಾಕರ ರಾವ್..!!

🗳️🇮🇳 ಮತದಾನವು ಪ್ರಜಾಪ್ರಭುತ್ವದ ಮೂಲ ಶಕ್ತಿ: ಡಾ. ಕೆ. ಪ್ರಭಾಕರ ರಾವ್..!!

52
0

ಸಾಗರ:“ಮತದಾನವು ಪ್ರಜಾಪ್ರಭುತ್ವದ ಮೂಲ ಶಕ್ತಿಯಾಗಿದ್ದು, ಭವಿಷ್ಯದ ಮತದಾರರಾದ ವಿದ್ಯಾರ್ಥಿಗಳು ಈಗಿನಿಂದಲೇ ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು” ಎಂದು ನಿವೃತ್ತ ಇತಿಹಾಸ ಪ್ರಾಧ್ಯಾಪಕರು ಹಾಗೂ ಸಂಪನ್ಮೂಲ ವ್ಯಕ್ತಿಯಾದ ಡಾ. ಕೆ. ಪ್ರಭಾಕರ ರಾವ್ ತಿಳಿಸಿದರು.

ಅವರು ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

“ಮತದಾನವು ಪ್ರಜಾಪ್ರಭುತ್ವದ ಜೀವಾಳವಾಗಿದೆ. ಮತದಾನದ ಮೂಲಕವೇ ಉತ್ತಮ ಆಡಳಿತ, ಪಾರದರ್ಶಕ ವ್ಯವಸ್ಥೆ ಹಾಗೂ ಜನಪರ ಸರ್ಕಾರ ನಿರ್ಮಾಣ ಸಾಧ್ಯ. ವಿದ್ಯಾರ್ಥಿಗಳು ಜಾಗೃತ ನಾಗರಿಕರಾಗಿ ಮತದಾನದ ಮಹತ್ವವನ್ನು ಅರಿತು, ಯೋಗ್ಯ ಹಾಗೂ ಜನಪರ ನಾಯಕನನ್ನು ಆಯ್ಕೆ ಮಾಡುವಲ್ಲಿ ಸಕ್ರಿಯರಾಗಬೇಕು” ಎಂದು ಹೇಳಿದರು.

ಹಣ, ಆಮಿಷ, ಭಯ ಅಥವಾ ಯಾವುದೇ ಪ್ರಭಾವಕ್ಕೆ ಒಳಗಾಗದೆ ಸ್ವತಂತ್ರ ಮತ್ತು ನಿಸ್ಪಕ್ಷಪಾತವಾಗಿ ಮತ ಚಲಾಯಿಸುವ ಅಗತ್ಯತೆಯನ್ನು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಣ್ಣಹನುಮಪ್ಪ ಜಿ. ಮಾತನಾಡಿ,
“ಪ್ರಜಾಪ್ರಭುತ್ವದ ಯಶಸ್ಸು ಜಾಗೃತ ಮತದಾರರ ಮೇಲೆ ಅವಲಂಬಿತವಾಗಿದೆ. ಮತದಾನವು ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಮಹತ್ತರ ಕರ್ತವ್ಯವೂ ಹೌದು. ವಿದ್ಯಾರ್ಥಿಗಳು ಕಡ್ಡಾಯವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವ ಮೂಲಕ ದೇಶದ ಸಕಾರಾತ್ಮಕ ಬದಲಾವಣೆಗೆ ಸಹಕಾರ ನೀಡಬೇಕು” ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಪ್ರಾಧ್ಯಾಪಕರಾದ ಮೇಘಾ ಭೂತೆ,ರಾಜ್ಯಶಾಸ್ತ್ರ ಉಪನ್ಯಾಸಕರಾದ ಗುರುಪ್ರಸಾದ ಪಿ.ಎಂ.,ನಿರ್ಲಿಪ್ತ ದೀಪ ಸ್ವರೂಪ,ಚೈತ್ರ ಕೆ.ಎಸ್.ಇನ್ನಿತರರು ಉಪಸ್ಥಿತರಿದ್ದರು.

✒️..ಅಮಿತ್.ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ