ಮನೆ ರಾಷ್ಟ್ರೀಯ ದೆಹಲಿ ಕೆಂಪು ಕೋಟೆಯ ಮೆಟ್ರೊ ನಿಲ್ದಾಣದ ಬಳಿ ಕಾರುಗಳು ಭಾರಿ ಸ್ಪೋಟ: ಹಲವರು ಸಾವು..!!

ದೆಹಲಿ ಕೆಂಪು ಕೋಟೆಯ ಮೆಟ್ರೊ ನಿಲ್ದಾಣದ ಬಳಿ ಕಾರುಗಳು ಭಾರಿ ಸ್ಪೋಟ: ಹಲವರು ಸಾವು..!!

94
0

ನವದೆಹಲಿ: ದೆಹಲಿ ನಗರದ ಕೆಂಪು ಕೋಟೆ ಬಳಿಯ ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಗೇಟ್ ನಂ.1ರ ನಿಲ್ಲಿಸಿದ್ದ ಹಲವು ಕಾರುಗಳು ಸ್ಫೋಟಗೊಂಡಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಘಟನೆಯಲ್ಲಿ 8 ಕ್ಕೂ ಅಧಿಕ ಜನ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದು ಮೃತರ ಸಂಖ್ಯೆ ಹೆಚ್ಚಾಗಬಹುದು ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇದು ಭಯೋತ್ಪಾದನೆ ಕೃತ್ಯ ಇರಬಹುದು ಎಂದು ಶಂಕಿಸಲಾಗಿದೆ.

ಈ ಹಿನ್ನೆಲೆಯಲ್ಲಿ ದೆಹಲಿ ಸೇರಿದಂತೆ ರಾಷ್ಟ್ರದ ಅನೇಕ ಕಡೆಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

`ಲಾ ಕಿಲ್ಲಾ ಮೆಟ್ರೊ ನಿಲ್ದಾಣದ ಬಳಿ ಸ್ಫೋಟ ಸಂಭವಿಸಿದೆ ಎಂದು ದೆಹಲಿ ಅಗ್ನಿಶಾಮಕ ದಳಕ್ಕೆ ಕರೆ ಬಂದಿದೆ. ಅಕ್ಕಪಕ್ಕದಲ್ಲಿದ್ದ ಕಾರುಗಳು, ಇತರ ವಾಹನಗಳಿಗೂ ಬೆಂಕಿ ತಗುಲಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದ್ದು, ಸಂಚಾರವನ್ನು ಪೊಲೀಸರು ನಿರ್ಬಂಧಿಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.ಕೆಂಪು ಕೋಟೆ ಬಳಿ ಕಾರು ಸ್ಫೋಟವಾದ ಬೆನ್ನಲ್ಲೇ ನಗರದಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ.

ಹೆಚ್ಚಿನ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t