ಮಂಡ್ಯ: ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಬುಧವಾರ (ನ.12) ನಿಧನರಾಗಿದ್ದಾರೆ. ಅಂತಾರಾಷ್ಟ್ರೀಯ ಪ್ರಶಸ್ತಿ ವಿಜೇತ ತಿಥಿ ಸಿನಿಮಾದಲ್ಲಿ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದ ಅವರು, ಆ ಸಿನಿಮಾದ ಮೂಲಕ ಗಡ್ಡಪ್ಪ ಅಂತಾನೇ ಫೇಮಸ್ ಆಗಿದ್ದರು.
ಮಂಡ್ಯ ತಾಲೂಕಿನ ನೊದೆ ಕೊಪ್ಪಲು ಗ್ರಾಮದ ತಮ್ಮ ನಿವಾಸದಲ್ಲಿ ನಿಧನರಾಗಿರುವ ಅವರ ಮೂಲ ಹೆಸರು ಚನ್ನೇಗೌಡ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಮೂಲ ಹೆಸರು ಚನ್ನೇಗೌಡ ಆದರೂ ಗಡ್ಡಪ್ಪ ಅಂತಾಲೇ ಕರೆಸಿಕೊಳ್ಳುತ್ತಿದ್ದರು. ತಿಥಿ, ತರ್ಲೆ ವಿಲೇಜ್, ಜಾನಿ ಮೇರಾ ನಾಮ್, ಹಳ್ಳಿ ಪಂಚಾಯಿತಿ ಸೇರಿ ಸುಮಾರು 8 ಸಿನಿಮಾಗಳಲ್ಲಿ ಅಭಿನಯಿಸಿದ್ದರು.
ಅಸ್ತಮಾ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಗಡ್ಡಪ್ಪ, ತಿಂಗಳ ಹಿಂದೆ ಬಿದ್ದು ಸೊಂಟ ಪೆಟ್ಟಾಗಿ, ಆಪರೇಷನ್ ಆಗಿತ್ತು. ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









