ಮನೆ Blog ಅಮಿತ್ ಶಾಗೆ ಬಳೆಯನ್ನು ಪೋಸ್ಟ್ ಮಾಡಿದ ಶಿವಮೊಗ್ಗದ ಯುವತಿಯರು..!!

ಅಮಿತ್ ಶಾಗೆ ಬಳೆಯನ್ನು ಪೋಸ್ಟ್ ಮಾಡಿದ ಶಿವಮೊಗ್ಗದ ಯುವತಿಯರು..!!

120
0

ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರು ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು. ಈಗ ದಹೆಲಿಯ ಅತ್ಯಂತ ಬಿಗಿ ಭದ್ರತಾ ಪ್ರದೇಶವಾದ ಕೆಂಪು ಕೋಟೆ ಸಮೀಪ ಬಾಂಬ್‌ ಸ್ಪೋಟ ಸಂಭವಿಸಿದೆ. ಉಗ್ರರ ಅಟ್ಟಹಾಸ ನಿಯಂತ್ರಿಸಲು ಕೇಂದ್ರ ಸರ್ಕಾರ ವಿಫಲವಾಗಿದೆ. ಆದ್ದರಿಂದ ಗೃಹ ಸಚಿವ ಅಮಿತ್‌ ಷಾ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಬಳೆಯನ್ನು ಪೋಸ್ಟ್ ಮಾಡಿದ ಯುವತಿಯರು:

ಯುವತಿಯರು ಗೃಹ ಸಚಿವರ ವೈಫಲ್ಯ ಖಂಡಿಸಿ ಕೇಂದ್ರ ಗೃಹ ಸಚಿವ ಅಮಿತ್‌ ಷಾ ಅವರಿಗೆ ಬಳೆಗಳನ್ನು ಅಂಚೆ ಮೂಲಕ ಪೋಸ್ಟ್‌ ಮಾಡಿದರು.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t