ಮನೆ ಶಿವಮೊಗ್ಗ ಆಂಗ್ಲ ಮಾಧ್ಯಮ ಶಾಲೆಯಲ್ಲೂ ಸಹ ಕನ್ನಡಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು..!!

ಆಂಗ್ಲ ಮಾಧ್ಯಮ ಶಾಲೆಯಲ್ಲೂ ಸಹ ಕನ್ನಡಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು..!!

64
0

ಆನಂದಪುರ:ವಿದ್ಯಾರ್ಥಿಗಳಿಗೆ ಶಾಲಾ ಹಂತದಲ್ಲಿಯೇ ಕನ್ನಡ ನಾಡು,ನುಡಿಯ ಚಿಂತನೆಯ ಬಗ್ಗೆ ಅರಿವನ್ನು ಮೂಡಿಸುವ ಕೆಲಸ ವಾಗಬೇಕಿದೆ ಎಂದು ವಿದ್ಯಾಭಾರತಿ ಆಂಗ್ಲ ಮಾಧ್ಯಮ ಹಾಗೂ ಜಿ ಆರ್ ಮೆಮೋರಿಯಲ್ ಹೈಸ್ಕೂಲ್ ಶಾಲಾ ಸಂಸ್ಥಾಪಕ ಕಾರ್ಯದರ್ಶಿಗಳಾದ ಶ್ರೀಮತಿ ನಾಗರತ್ನ ತಿಳಿಸಿದರು.

ಇವರು ಇಂದು ಸಮೀಪದ ಗೌತಮಪುರದ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಜಿ ಆರ್ ಮೆಮೋರಿಯಲ್ ಹೈಸ್ಕೂಲ್ ವತಿಯಿಂದ ಮಕ್ಕಳ ದಿನಾಚರಣೆ ಹಾಗೂ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಕ್ಕಳಿಗೆ ಆಯೋಜಿಸಿದ ವಿವಿಧ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ಆಂಗ್ಲ ಮಾದ್ಯಮ ಶಾಲೆಗಳಾದರೂ ಸಹ ಕನ್ನಡ ವಿಷಯಕ್ಕೆ ಹೆಚ್ಚಿನ ಒತ್ತನ್ನು ನೀಡಿ ವಿದ್ಯಾರ್ಥಿಗಳಿಗೆ ಕನ್ನಡಾಭಿಮಾನ ಮೂಡಿಸುವ ಮೂಲಕ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ತೊಡಗಿಕೊಳ್ಳುವ ಹಾಗೆ ಮಾಡಬೇಕು ಎಂದರು.

ವಿದ್ಯಾರ್ಥಿಗಳು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಗಳಿಗೆ ದಾಸರಾಗುತ್ತಿದ್ದಾರೆ ಇದರಿಂದ ಹೊರಬಂದು ಉತ್ತಮ ಪ್ರಜೆ ಯಾಗಿ ಹೊರಹೊಮ್ಮಿ ಎಂದು ಸಲಹೆ ನೀಡಿದರು.

ಸಹ ಶಿಕ್ಷಕಿಯಾದ ಶ್ರೀಮತಿ ಅನಿತಾ ರವರು ಪ್ರಾಸ್ತಾವಿಕ ನುಡಿಗಳನ್ನಾಡಿ ,ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಮತ್ತು ಹೋರಾಟಗಾರರನ್ನು ಸ್ಮರಿಸಿಕೊಳ್ಳುತ್ತಾ ಇಂದಿನ ವಿದ್ಯಾರ್ಥಿಗಳು ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ಹೇಗೆಲ್ಲ ಸಜ್ಜುಗೊಳ್ಳಬೇಕು ಎಂಬುದನ್ನು ವಿವರವಾಗಿ ತಿಳಿಸಿಕೊಟ್ಟರು.

ಈ ಸಂದರ್ಭದಲ್ಲಿ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶ್ರೀಮತಿ ಪ್ರಿಯಾಂಕ ನಿರೂಪಿಸಿ, ಕುಮಾರಿ ಸಿಂಚನ ಸ್ವಾಗತವನ್ನು ಹಾಗೂ ಶ್ರೀಮತಿ ರಂಜಿತ ವಂದನಾರ್ಪಣೆಯನ್ನು ನಡೆಸಿದರು.

ವಿಶೇಷವಾಗಿ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ನೃತ್ಯವನ್ನು ಮಾಡಿದರು ಮತ್ತು ಮಧ್ಯಾಹ್ನ ವಿದ್ಯಾರ್ಥಿಗಳಿಗಾಗಿ ಮನೋರಂಜನ ಕ್ರೀಡೆಗಳನ್ನು ಆಯೋಜಿಸಲಾಗಿತ್ತು.ನಂತರ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರ ವತಿಯಿಂದ ಸಿಹಿ ವಿತರಣೆ ನಡೆಸಲಾಯಿತು.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ;https://chat.whatsapp.com/CnYYumPSez6AMYyw8cHG9A?mode=ac_t