ಶಿವಮೊಗ್ಗ: ಜಿಲ್ಲೆಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಡೀನ್ ವಿರುಪಾಕ್ಷಪ್ಪ ಅವರ ಆಪ್ತ ಸಹಾಯಕ (ಪಿಎ) ಲಕ್ಷ್ಮೀಪತಿ ಸಿ.ಕೆ. ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ.
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಾಲ್ಕು ತಂಡಗಳ ಅಧಿಕಾರಿಗಳು ಏಕಕಾಲಕ್ಕೆ ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ಶಿವಮೊಗ್ಗ ನಗರದ ಜೆ.ಹೆಚ್. ಪಟೇಲ್ ಬಡಾವಣೆಯ ಮನೆ, ಮೆಡಿಕಲ್ ಕಾಲೇಜು ಕ್ವಾಟರ್ಸ್ ಹಾಗೂ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿರುವ ಮನೆ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ಮುಂದುವರೆಸಿದ್ದಾರೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









