Home Blog ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ: ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ…!!

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನ: ಅಧ್ಯಕ್ಷರಾಗಿ ಕಲಗೋಡು ರತ್ನಾಕರ್ ಆಯ್ಕೆ…!!

121
0

ಶಿವಮೊಗ್ಗ:(ಹೊಸನಗರ)
ತಾಲ್ಲೂಕಿನ ಪುರಾಣ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮುಜರಾಯಿ ಇಲಾಖೆಯಿಂದ 9 ಜನ ಸದಸ್ಯರ ಸಮಿತಿ ರಚನೆಗೊಂಡಿದ್ದು, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಕಲಗೋಡು ರತ್ನಾಕರ್ ಸಮಿತಿಗೆ ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಈಚೆಗೆ ನಡೆದ ಸಾಮಾನ್ಯ ಸಭೆಯಲ್ಲಿ ಸರ್ವಾನುಮತದದಿಂದ ಆಯ್ಕೆ ಮಾಡಲಾಗಿದೆ.ಸಾಮಾನ್ಯ ಸಭೆಯ ನಂತರ ಸಾಗರ – ಹೊಸನಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರನ್ನು ದೇವಸ್ಥಾನ ಸಮಿತಿ ವತಿಯಿಂದ ಅವರ ಸ್ವಗೃಹದಲ್ಲಿ ಭೇಟಿ ಮಾಡಿದರು ಆಗ ಕಲಗೋಡು ರತ್ನಾಕರ್ ಅವರಿಗೆ ಅಭಿನಂದನೆ ಸಲ್ಲಿಸಿದರು.

ಈ ವೇಳೆ ಪ್ರತಿಕ್ರಿಯೆ ನೀಡಿದ ದೇವಸ್ಥಾನದ ನೂತನ ಅಧ್ಯಕ್ಷ ಕಲಗೋಡು ರತ್ನಾಕರ್ ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ಪಟ್ಟಿಯಲ್ಲಿ ಅಮ್ಮನಘಟ್ಟ ಜೇನುಕಲ್ಲಮ್ಮ ಕ್ಷೇತ್ರವು ಸ್ಥಾನ ಪಡೆದಿದ್ದು ದೇವಿಯ ಭಕ್ತರಿಗೆ ಸಂತಸ ತಂದಿದೆ. ದೇವಸ್ಥಾನ ಸರ್ವತೋಮುಖ ಅಭಿವೃದ್ಧಿಗೆ ಸಮಿತಿಯು ಕಾರ್ಯೋನ್ಮುಖವಾಗಲಿದೆ.

ಭಕ್ತರಿಗೆ ಮೂಲ ಸೌಕರ್ಯ ಒದಗಿಸುವುದು, ದೇವಳದ ಪರಂಪರೆ ಉಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t