ಸಂಕ್ರಾಂತಿ ಹಬ್ಬದ ಸಂದರ್ಭ ಪ್ರಯಾಣಿಕರ ದಟ್ಟಣೆ ಕಡಿಮೆ ಮಾಡಿಕೊಡಲು ನೈರುತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲಿದೆ.
ಜನವರಿ 13 ಮತ್ತು 23ರಂದು ರಾತ್ರಿ 10.45ಕ್ಕೆ ಯಶವಂತ ಪುರದಿಂದ ಹೊರಟು ಮರುದಿನ ಬೆಳಿಗ್ಗೆ 4.45ಕ್ಕೆ ತಾಳಗುಪ್ಪ ತಲುಪಲಿದೆ.
ಜನವರಿ 14 ಮತ್ತು24ರಂದು ಬೆಳಿಗ್ಗೆ 10ಕ್ಕೆ ತಾಳಗುಪ್ಪದಿಂದ ಹೊರಟು ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ. ತುಮಕೂರು, ಅರಸೀಕೆರೆ, ತಿಪಟೂರು, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ವಿಶೇಷ ರೈಲುಗಳು ನಿಲುಗಡೆ ಹೊಂದಲಿವೆ ಎಂದು ನೈರುತ್ಯ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
✒️..ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









