ಆನಂದಪುರ :ಜಗತ್ತಿಗೆ ಜ್ಞಾನದ ಬೆಳಕನ್ನು ನೀಡಿದ ಮಹಾನ್ ಜ್ಞಾನಿ ಸ್ವಾಮಿ ವಿವೇಕಾನಂದರು ಎಂದು ವಿದ್ಯಾಭಾರತಿ ಆಂಗ್ಲ ಮಾಧ್ಯಮ ಹಾಗೂ ಜಿ ಆರ್ ಮೆಮೋ ರಿಯಲ್ ಹೈಸ್ಕೂಲ್ ಸಂಸ್ಥಾಪಕ ಕಾರ್ಯದರ್ಶಿ ನಾಗರತ್ನ ಎಸ್.ಕೆ ತಿಳಿಸಿದರು.
ಇವರು ಸಮೀಪದ ಗೌತಮಪುರದಲ್ಲಿ ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆ ಮತ್ತು ಜಿ ಆರ್ ಮೆಮೋರಿಯಲ್ ಹೈಸ್ಕೂಲ್ ನಲ್ಲಿ ಹಮ್ಮಿಕೊಂಡಿದ್ದಂತಹ ಸ್ವಾಮಿ ವಿವೇಕಾನಂದರ ಜಯಂತಿಯನ್ನು ಉದ್ದೇಶಿಸಿ ಮಾತನಾಡಿದರು.
ಭಾರತೀಯ ನೆಲದ ಶ್ರೇಷ್ಠತೆಯನ್ನು ವಿಶ್ವಕ್ಕೆ ಮಾದರಿಯಾಗಿ ಪ್ರಚಾರ ಮಾಡಿದ ವಿವೇಕಾನಂದರು ಯುವಜನತೆಗೆ ಆದರ್ಶವಾಗಬೇಕು.ಅವರ ವಿಚಾರಧಾರೆಗಳನ್ನು ಓದುತ್ತಲೇ ಅಲ್ಲದೆ, ಅವರು ತೋರಿಸಿದ ದಾರಿಯಲ್ಲಿ ಯುವ ಜನರು ಸಾಗಬೇಕು ಎಂದರು.

ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳುವ ಮೂಲಕ ಉನ್ನತ ಸ್ಥಾನಕ್ಕೆ ಹೋಗಬೇಕು ಎಂಬುದು ನನ್ನ ಆಸೆಯಾಗಿದೆ ಎಂಬುದಾಗಿ ತಮ್ಮ ಆಶಯಗಳನ್ನು ವ್ಯಕ್ತಪಡಿಸಿದರು.
ವಿಶೇಷವಾಗಿ ಮಕ್ಕಳು ಸ್ವಾಮಿ ವಿವೇಕಾನಂದರ ವೇಷ ಭೂಷಣವನ್ನು ಧರಿಸಿದ್ದರು. ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯವರು ಮುಖ್ಯೋಪಾಧ್ಯಾಯರು ಸಹ ಶಿಕ್ಷಕರು ಭಾಗಿಯಾಗಿದ್ದರು.
✒️…ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









