ಮನೆ ಶಿವಮೊಗ್ಗ ತೀರ್ಥಹಳ್ಳಿ/ ಕೆಎಸ್‌ಆರ್‌ಟಿಸಿ ಬಸ್ ಕಾರು ನಡುವೆ ಮುಖಾಮುಖಿ ಡಿಕ್ಕಿ ನಾಲ್ವರು ಸಾವು..!!

ತೀರ್ಥಹಳ್ಳಿ/ ಕೆಎಸ್‌ಆರ್‌ಟಿಸಿ ಬಸ್ ಕಾರು ನಡುವೆ ಮುಖಾಮುಖಿ ಡಿಕ್ಕಿ ನಾಲ್ವರು ಸಾವು..!!

13
0

ತೀರ್ಥಹಳ್ಳಿ: ಕೆಎಸ್‌ಆರ್‌ಟಿಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತೀರ್ಥಹಳ್ಳಿ ತಾಲೂಕು ಭಾರತಿಪುರದ ಬಳಿ ಮಂಗಳವಾರ ರಾತ್ರಿ 10 ಗಂಟೆಗೆ ಈ ಅಪಘಾತ ಸಂಭವಿಸಿದೆ.

ತೀರ್ಥಹಳ್ಳಿ ಕಡೆಯಿಂದ ರಾಯಚೂರಿಗೆ ಹೊರಟಿದ್ದ ಕೆಎಸ್‌ಆರ್ ಟಿಸಿ ಬಸ್‌ ಹಾಗೂ ದಾವಣಗೆರೆ ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿ ಮಾರ್ಗವಾಗಿ ಶೃಂಗೇರಿ ಕಡೆ ಹೊರಟಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ.

ಕಾರು ಬಸ್ ನಡುವೆ ನಡೆದ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮಹಿಳೆ ಫಾತಿಮಾ (70 ವರ್ಷ), ರಿಹಾನ್ (15 ವರ್ಷ), ರಾಹಿಲ್ (9 ವರ್ಷ) ಹಾಗೂ ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ಮಹಿಳೆ ಹಾಗೂ ಚಾಲಕರನ್ನು ಪಟ್ಟಣದ ಜೆ.ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಶಿವಮೊಗ್ಗ ನಾರಾಯಣ ಹೃದಯಾಲಯಕ್ಕೆ ರವಾನೆ ಮಾಡಲಾಗಿದೆ.

ಕಾರಿನಲ್ಲಿದ್ದವರು ಶೃಂಗೇರಿ ಮೂಲದ ಮೆಣಸೆಯವರಾಗಿದ್ದು, ದಾವಣಗೆರೆ ಜಿಲ್ಲೆ ಚನ್ನಗಿರಿಯಲ್ಲಿ ನಡೆದ ಮದುವೆಯಲ್ಲಿ ಭಾಗಿಯಾಗಿ ಶೃಂಗೇರಿಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿದೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತೀರ್ಥಹಳ್ಳಿ ಪೊಲೀಸರು, ರಸ್ತೆ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

✒️..ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ