ಬೆಂಗಳೂರು: ಎಸ್‌ಎಸ್ಎಲ್‌ಸಿ ಪರೀಕ್ಷೆಗಳು ಹತ್ತಿರವಾಗುತ್ತಿ ರುವಾಗಲೇ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಬಂಪರ್ ಆಫರ್ ಘೋಷಿಸಿದ್ದು ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಪಡೆಯುವ ಸರ್ಕಾರಿ ಶಾಲೆಯ ಮೂವರು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವುದಾಗಿ ಘೋಷಿಸಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆಗೆ ಶಿಕ್ಷಣ ಹೊಸ ಇಲಾಖೆ ಯೋಜನೆ ರೂಪಿಸಿದ್ದು ಅದರಂತೆ ಪ್ರತಿ ತಾಲೂಕು ಹಾಗೂ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂಕ ಪಡೆಯುವ ತಲಾ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ನೀಡಲು ಗುಣ ಮಟ್ಟ ಭರವಸೆ ಮತ್ತು ವಿದ್ಯಾರ್ಥಿ ಪ್ರೇರಣ ಉಪಕ್ರಮ ಕ್ರಿಯಾ ಯೋಜನೆಯಲ್ಲಿ ಪ್ರೋತ್ಸಾಹ ಕಾರ್ಯಕ್ರಮವನ್ನು ಜಾರಿ ಮಾಡಲಾಗುತ್ತಿದೆ .
ಎಸ್ ಎಸ್ ಎಲ್ ಸಿ ಅತಿ ಹೆಚ್ಚು ಅಂಕ ಪಡೆಯುವ ತಾಲೂಕಿನ ಪ್ರತಿ ಮೂವರು ಹಾಗೂ ಜಿಲ್ಲೆಯ ಮೂವರು ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತದೆ ಅತಿ ಹೆಚ್ಚು ಅಂಕ ಪಡೆಯುವ ಈ ಮೂವರು ವಿದ್ಯಾರ್ಥಿಗಳಿಗೆ ತಲ 50,000ಗಳನ್ನು ಅವರ ಅಕೌಂಟ್ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ ಈ ಸಂಬಂಧ ಸರ್ಕಾರ ಅಧಿಕೃತ ಸುತ್ತೋಲೆ ಹೊರಡಿಸಿದೆ.

ಕಳೆದ ನವಂಬರ್ ನಲ್ಲಿ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ತಾಲೂಕು ಹಾಗು ಜಿಲ್ಲೆಗಳಲ್ಲಿ ಅತಿ ಹೆಚ್ಚು ಅಂಕ ಪಡೆಯುವ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ನೀಡುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದರು ಈಗ ಈ ಸಂಬಂಧ ಅಧಿಕೃತ ಆದೇಶ ಹೊರಬಿದ್ದಿದೆ.
ಎಸ್‌ಎಸ್‌ಎಲ್‌ಸಿಯಲ್ಲಿ ಈ ಹಿಂದೆ ಫಲಿತಾಂಶ ಸುಧಾರಣೆಗೆ ಪ್ರೌಢಶಾಲಾ ಶಿಕ್ಷಕರಿಗೆ ಬಂಫರ್ ಆಫರ್ ನೀಡಿದ್ದ ಇಲಾಖೆ ಫಲಿತಾಂಶ ಸುಧಾರಿಸುವ ಶಿಕ್ಷಕರಿಗೆ ಹೆಚ್ಚುವರಿ ಒಂದು ಸಾವಿರ ಪ್ರೋತ್ಸಾಹಧನ ನೀಡುವ ಯೋಜನೆ ಜೊತೆಗೆ ಇದೀಗ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ನೀಡಲು ಶಿಕ್ಷಣ ಇಲಾಖೆ ಮುಂದಾಗಿದೆ.
✒️…ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ








