ಮನೆ ಶಿವಮೊಗ್ಗ ಶಿವಮೊಗ್ಗದ ರಾಗಿಗುಡ್ಡ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿಗಳಿಗೆ ನಿರಂತರ ಕೆಮ್ಮು; ಜಿಲ್ಲಾಸ್ಪತ್ರೆಗೆ ದಾಖಲು

ಶಿವಮೊಗ್ಗದ ರಾಗಿಗುಡ್ಡ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿಗಳಿಗೆ ನಿರಂತರ ಕೆಮ್ಮು; ಜಿಲ್ಲಾಸ್ಪತ್ರೆಗೆ ದಾಖಲು

47
0

ಶಿವಮೊಗ್ಗ ನಗರದ ರಾಗಿಗುಡ್ಡದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಅನುದಾನಿತ ವಸತಿ ಶಾಲೆಯ 17 ವಿದ್ಯಾರ್ಥಿಗಳಿಗೆ ಕಳೆದ ಮೂರು ದಿನಗಳಿಂದ ನಿರಂತರ ಕೆಮ್ಮು ಕಾಣಿಸಿಕೊಂಡಿದ್ದು, ಶಾಲಾ ವಾತಾವರಣದಲ್ಲಿ ಆತಂಕ ಉಂಟಾಗಿದೆ.


6ರಿಂದ 10ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಈ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ, ವಸತಿ ಶಾಲೆಯ ವಾರ್ಡನ್ ತಕ್ಷಣ ಎಚ್ಚರಿಕೆ ವಹಿಸಿ ವಿದ್ಯಾರ್ಥಿಗಳನ್ನು ಶಿವಮೊಗ್ಗದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ವೈದ್ಯರ ಮೇಲ್ವಿಚಾರಣೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.


ವಿದ್ಯಾರ್ಥಿಗಳ ಆರೋಗ್ಯದ ಕುರಿತು ಮಾಹಿತಿ ಪಡೆದ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿ.ಇ.ಓ.), ತಾಲೂಕು ಆರೋಗ್ಯಾಧಿಕಾರಿ (ಟಿ.ಹೆಚ್.ಒ) ಸೇರಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿಗಳನ್ನು ಪರಿಶೀಲಿಸಿ ಅಗತ್ಯ ಚಿಕಿತ್ಸೆಯನ್ನು ಸಮರ್ಪಕವಾಗಿ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.


ಈ ಘಟನೆಗೆ ಕಾರಣವೇನು ಎಂಬುದರ ಕುರಿತು ಆರೋಗ್ಯ ಇಲಾಖೆ ತನಿಖೆ ನಡೆಸುತ್ತಿದೆ.

✒️…ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ