ಮನೆ ಶಿವಮೊಗ್ಗ 😱🔥 ರಿಪ್ಪನ್ ಪೇಟೆ ಬಳಿ 40 ಪ್ರಯಾಣಿಕರಿದ್ದ ಖಾಸಗಿ ಬಸ್‌ಗೆ ಬೆಂಕಿ..!!

😱🔥 ರಿಪ್ಪನ್ ಪೇಟೆ ಬಳಿ 40 ಪ್ರಯಾಣಿಕರಿದ್ದ ಖಾಸಗಿ ಬಸ್‌ಗೆ ಬೆಂಕಿ..!!

53
0

ರಿಪ್ಪನ್ ಪೇಟೆ:
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪ ಮಂಗಳವಾರ ರಾತ್ರಿ ಖಾಸಗಿ ಸ್ಲೀಪರ್ ಕೋಚ್ ಬಸ್ಸಿಗೆ ಏಕಾಏಕಿ ಬೆಂಕಿ ತಗುಲಿ ದಗದಗನೆ ಹೊತ್ತಿ ಉರಿದ ಘಟನೆ ನಡೆದಿದೆ.

ರಿಪ್ಪನ್‌ಪೇಟೆಯ ಅರಸಾಳು ಮತ್ತು ಸುಡೂರು ಗ್ರಾಮದ ಮಧ್ಯೆ ಸಂಚರಿಸುತ್ತಿದ್ದ ಖಾಸಗಿ ಅನ್ನಪೂರ್ಣೇಶ್ವರಿ ಸ್ಲೀಪರ್ ಕೋಚ್ ಬಸ್ನಲ್ಲಿ ಅಚಾನಕ್ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ನಿಟ್ಟೂರು, ನಗರ, ಹೊಸನಗರ ಹಾಗೂ ರಿಪ್ಪನ್‌ಪೇಟೆ ಪ್ರದೇಶಗಳಿಂದ ಸುಮಾರು 40 ಪ್ರಯಾಣಿಕರನ್ನು ಹತ್ತಿಸಿಕೊಂಡು ಬೆಂಗಳೂರಿಗೆ ತೆರಳುತ್ತಿದ್ದ ಬಸ್, ಅರಸಾಳು–ಸುಡೂರು ಗ್ರಾಮದ ಮಧ್ಯೆ ಬಂದಾಗ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಕಾಣುತ್ತಿದ್ದಂತೆ ಪ್ರಯಾಣಿಕರು ಆತಂಕದಿಂದ ಕೂಗಿಕೊಳ್ಳಲು ಆರಂಭಿಸಿದ್ದಾರೆ.

ಪ್ರಾಣಾಪಾಯದಿಂದ ಪಾರಾಗುವ ಸಲುವಾಗಿ ಕೆಲ ಪ್ರಯಾಣಿಕರು ತುರ್ತು ಬಾಗಿಲು ಒಡೆದು ಹೊರ ಬಂದರೆ, ಇನ್ನು ಕೆಲವರು ಕಿಟಕಿಗಳನ್ನು ಒಡೆದು ಹೊರಗೆ ಜಿಗಿದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸದೆ ಪ್ರಯಾಣಿಕರು ಪಾರಾಗಿದ್ದಾರೆ.

ಈ ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಘಟನೆಯ ಮಾಹಿತಿ ಪಡೆದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿತು, ಆದರೆ ಬೆಂಕಿಯ ತೀವ್ರತೆಗೆ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಈ ಕುರಿತು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಂಕಿ ಕಾಣಿಸಿಕೊಳ್ಳಲು ಕಾರಣ ಏನು ಎಂಬುದರ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

✒️…ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ;https://chat.whatsapp.com/IY9pAkaWjY80mynFTlPYHJ