ತೀರ್ಥಹಳ್ಳಿ: ಮಲೆನಾಡಿನ ಭಾಗದಲ್ಲಿ ಮತ್ತೆ ಮಂಗನ ಕಾಯಿಲೆ (KFD – ಕ್ಯಾಸನೂರು ಫಾರೆಸ್ಟ್ ಡಿಸೀಸ್) ಭೀತಿ ತಲೆಎತ್ತಿದ್ದು, ತಾಲೂಕಿನ ಕಟ್ಟೆಹಕ್ಕು ಸಮೀಪದ ನಿವಾಸಿ ಕಿಶೋರ್ (29) ಎಂಬುವವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಸಾವು ಕೆಎಫ್‌ಡಿ ಸೋಂಕಿನಿಂದ ಸಂಭವಿಸಿರುವ ಈ ವರ್ಷದ ಮೊದಲ ಪ್ರಕರಣವಾಗಿದೆ.

ಘಟನೆಯ ವಿವರ:
ಕಳೆದ ಒಂದು ವಾರದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಿಶೋರ್ ಅವರನ್ನು ಮೊದಲು ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆರೋಗ್ಯ ಸ್ಥಿತಿ ಹದಗೆಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ದುರದೃಷ್ಟವಶಾತ್, ಚಿಕಿತ್ಸೆಗೂ ಸ್ಪಂದಿಸದೆ ನಿನ್ನೆ ತಡರಾತ್ರಿ ಅವರು ಕೊನೆಯುಸಿರೆಳೆದಿದ್ದಾರೆ.
ಕಿಶೋರ್ ಅವರಿಗೆ ಕೆಎಫ್‌ಡಿ (ಮಂಗನ ಕಾಯಿಲೆ) ತಗುಲಿ ಸಾವನಪ್ಪಿರುವುದು ದೃಢಪಟ್ಟಿರುವ ಹಿನ್ನೆಲೆಯಲ್ಲಿ, ಈ ಘಟನೆ ಮಲೆನಾಡು ಭಾಗದಲ್ಲಿ ಮತ್ತೆ ಹೆಚ್ಚಿನ ಆತಂಕಕ್ಕೆ ಕಾರಣವಾಗಿದೆ. ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
✒️…ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ









