ಮನೆ ಶಿವಮೊಗ್ಗ ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಯುವಕ ಆತ್ಮಹತ್ಯೆ..!!

ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಯುವಕ ಆತ್ಮಹತ್ಯೆ..!!

48
0

ಸಾಗರ: ಜೀವನದಲ್ಲಿ ಜಿಗುಪ್ಸೆ ಉಂಟಾಗಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ನಡೆದಿದೆ.

ಸಾಗರ ತಾಲೂಕಿನ ಆನಂದಪುರದ ಅಶೋಕ ರಸ್ತೆ ನಿವಾಸಿಯಾದ ನವೀನ್ (27), ತಂದೆ ನಾಗರಾಜ ಅವರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ನವೀನ್ ಕಳೆದ ಒಂದು ವರ್ಷದಿಂದ ಸಣ್ಣ ಪ್ರಮಾಣದಲ್ಲಿ ಅಡಿಕೆ ವ್ಯಾಪಾರ ಮಾಡುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಅವರು ಯಾರೊಂದಿಗೂ ಸರಿಯಾಗಿ ಮಾತನಾಡುತ್ತಿರಲಿಲ್ಲ ಎನ್ನಲಾಗಿದ್ದು, ಮನೆಯವರು ವಿಚಾರಿಸಿದರೂ ಯಾವುದೇ ಕಾರಣ ತಿಳಿಸಿರಲಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಫೆಬ್ರವರಿ 18ರಂದು ಬುಧವಾರ ಮನೆಯಲ್ಲಿಯೇ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಅವರನ್ನು ಮನೆಯವರು ಕಂಡು, ತಕ್ಷಣವೇ ಅಕ್ಕಪಕ್ಕದವರ ಸಹಾಯದಿಂದ ಆನಂದಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಪರೀಕ್ಷಿಸಿದ ವೈದ್ಯರು ಅವರು ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

✒️..ಅಮಿತ್ ಆರ್ ಆನಂದಪುರ

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/IY9pAkaWjY80mynFTlPYHJ