
ಸಿದ್ದಾಪುರ ತಾಲೂಕಿನ ಕೊಂಡ್ಲಿ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ಶಿರಸಿ–ಸಿದ್ದಾಪುರ ಘಟಕದ ವತಿಯಿಂದ ಜಾತ್ರೆಗೆ ಆಗಮಿಸಿದ ಭಕ್ತಾದಿಗಳಿಗೆ ತಂಪು ಪಾನೀಯ ವಿತರಿಸುದರು.ಜಾತ್ರಾ ಸ್ಥಳದಲ್ಲಿ ನಡೆದ ಈ ಸೇವಾ ಕಾರ್ಯಕ್ಕೆ ಭಕ್ತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷ ಕಾರ್ತಿಕ್ ಅರಮನೆ ಮಾತನಾಡಿ, ಶಿರಸಿ–ಸಿದ್ದಾಪುರ ಘಟಕವು ಮುಂದಿನ ದಿನಗಳಲ್ಲಿ ಸಾರ್ವಜನಿಕ ಸೇವೆ ಹಾಗೂ ವಿವಿಧ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಮಾಜದ ಅಭಿವೃದ್ಧಿಯ ದಾರಿಯಲ್ಲಿ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು.

ನಾಗರಾಜ್ ಸಿದ್ದಾಪುರ ಮಾತನಾಡಿ, ಜಾತ್ರಾ ಮಹೋತ್ಸವದ ಸಂದರ್ಭದಲ್ಲಿ ಹಮ್ಮಿಕೊಂಡಿರುವ ಈ ಸೇವಾ ಕಾರ್ಯಕ್ರಮ ಶ್ಲಾಘನೀಯವಾಗಿದೆ. ಪದಾಧಿಕಾರಿಗಳ ಪರಿಶ್ರಮ ಮತ್ತು ಒಗ್ಗಟ್ಟಿನಿಂದ ಉತ್ತಮ ಕಾರ್ಯಗಳು ನಡೆಯುತ್ತಿವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸಮಾಜಮುಖಿ ಸೇವೆಗಳು ಘಟಕದಿಂದ ನಡೆಯಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ರಾಘು, ನಮನ್ ಜೋಗಿ, ಆನಂದ ದೊಡ್ಮನೆ, ಪ್ರತೀಕ್ ಉಪ್ಪೂರ್, ವೆಂಕಟೇಶ್ ನಾಯ್ಕ, ಚಂದ್ರು ಮಡಿವಾಳ ಸೇರಿದಂತೆ ಇತರ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.


✒️..ಅಮಿತ್ ಆರ್ ಆನಂದಪುರ
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಾಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://amithtimes.com/ಸಾಗರ-ಲೋಕಾಯುಕ್ತ-ಸಾರ್ವಜನಿ/









