✒️..ಅಮಿತ್ ಆರ್ ಆನಂದಪುರ
ಆನಂದಪುರ: ತೋಟಕ್ಕೆ ನೀರು ಹಾಯಿಸಲು ಹೋದ ಸಂದರ್ಭದಲ್ಲಿ ವಿಷಪೂರಿತ ಹಾವು ಕಚ್ಚಿ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಹುಚ್ಚಪ್ಪ ಎಂ (65) ಮೃತಪಟ್ಟ ದುರ್ದೈವಿ. ಇವರು ಮಂಗಳವಾರ (ಮಾ. 17) ರಾತ್ರಿ ಸುಮಾರು 8:30ರ ವೇಳೆಗೆ ತಮ್ಮ ತೋಟಕ್ಕೆ ನೀರು ಹಾಯಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ಅವರ ಎಡಗಾಲಿಗೆ ಯಾವುದೋ ಹಾವು ಕಚ್ಚಿದೆ. ತಕ್ಷಣ ಮನೆಗೆ ಮರಳಿದ ಅವರು ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ.

ಕೂಡಲೇ ಅವರನ್ನು ಚಿಕಿತ್ಸೆಗಾಗಿ ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 9:45ರ ಸುಮಾರಿಗೆ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಈ ಕುರಿತು ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t










