ಮನೆ ಶಿವಮೊಗ್ಗ ಕುಡಿಗೆರೆ ಅಕ್ರಮ ಜಂಬಿಟ್ಟಿಗೆ ಕಲ್ಲು ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ..!!

ಕುಡಿಗೆರೆ ಅಕ್ರಮ ಜಂಬಿಟ್ಟಿಗೆ ಕಲ್ಲು ಗಣಿಗಾರಿಕೆ ಮೇಲೆ ಅಧಿಕಾರಿಗಳ ದಾಳಿ..!!

27
0

✒️..ಅಮಿತ್ ಆರ್ ಆನಂದಪುರ

ಸಾಗರ: ತಾಲೂಕಿನ ಕುಡಿಗೆರೆ ಗ್ರಾಮದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಕಲ್ಲು (Laterite Stone) ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಖಚಿತ ಮಾಹಿತಿ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ದಾಳಿ ನಡೆಸಿದ ವೇಳೆ ಲಾರಿಯಲ್ಲಿ ಜಂಬಿಟ್ಟಿಗೆ ಕಲ್ಲುಗಳನ್ನು ತುಂಬಲಾಗುತ್ತಿತ್ತು. ಅಧಿಕಾರಿಗಳನ್ನು ಕಂಡೊಡನೆ ಲಾರಿ ಚಾಲಕ ಹಾಗೂ ಸ್ಥಳದಲ್ಲಿದ್ದ ಇತರರು ವಾಹನವನ್ನು ಬಿಟ್ಟು ಪರಾರಿಯಾಗಿದ್ದಾರೆ ಎಂದು ಗಣಿ ಇಲಾಖೆಯ ಮೂಲಗಳು ತಿಳಿಸಿವೆ.

ಕುಡಿಗೆರೆ ಗ್ರಾಮದಲ್ಲಿ ನೆಡೆಯುತ್ತಿದ್ದ ಅಕ್ರಮ ಚಟುವಟಿಕೆಯಿಂದ ಸರ್ಕಾರಕ್ಕೆ ಸುಮಾರು ₹1,42,800 ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.
ಈ ಸಂಬಂಧ ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಮುಗಿಸಿರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t