ಮನೆ Blog ಮನೆ ಬಾಗಿಲು ಮುರಿದು ಚಿನ್ನಾಭರಣ, ಹಣ ಕಳವು/ಗ್ರಾಮಸ್ಥರ ಸಹಕಾರದೊಂದಿಗೆ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು..!!

ಮನೆ ಬಾಗಿಲು ಮುರಿದು ಚಿನ್ನಾಭರಣ, ಹಣ ಕಳವು/ಗ್ರಾಮಸ್ಥರ ಸಹಕಾರದೊಂದಿಗೆ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು..!!

25
0
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.6248146, 0.476875);sceneMode: 8;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 44;

✒️..ಅಮಿತ್ ಆರ್ ಆನಂದಪುರ

ಮನೆ ಬಾಗಿಲು ಮುರಿದು ಚಿನ್ನಾಭರಣ ಹಾಗೂ ಹಣ ಕಳವು. ಗ್ರಾಮಸ್ಥರ ಸಹಕಾರದಿಂದ ಆರೋಪಿ ಬಂಧನ ಮಾಡಿದ ಘಟನೆ ಆನಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಉಳ್ಳೂರಿನ ಸಮೀಪದ ಬ್ರಾಹ್ಮಣ ಮಂಚಾಲೆ ನಿವಾಸಿ ಶ್ರೀಮತಿ ನಾಗರತ್ನ ಎಂಬುವವರು ದಿನಾಂಕ 19/02/2026 ರಂದು ಮಧ್ಯಾಹ್ನ ಮನೆಯಿಂದ ಹೊರಗೆ ಹೋದ ಸಂದರ್ಭದಲ್ಲಿ, ಅನಾಮಧೇಯ ಕಳ್ಳರು ಮುಂಭಾಗದ ಬಾಗಿಲು ಮುರಿದು ಒಳ ನುಗ್ಗಿ ಮನೆಯಲ್ಲಿದ್ದ ಸುಮಾರು 70,000 ರೂ. ಮೌಲ್ಯದ 8.5 ಗ್ರಾಂ ಚಿನ್ನದ ಆಭರಣಗಳು ಹಾಗೂ 7,000 ರೂ. ನಗದನ್ನು ದೋಚಿ ಪರಾರಿಯಾಗಿದ್ದರು.

ಈ ಕುರಿತುಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಗ್ರಾಮಸ್ಥರ ಸಮಯಪ್ರಜ್ಞೆ – ಆರೋಪಿ ಅಂದರ್:

ಬ್ರಾಹ್ಮಣ ಮಂಚಾಲೆ ಗ್ರಾಮದಲ್ಲಿ ಮತ್ತೊಮ್ಮೆ ಕಳ್ಳತನಕ್ಕೆ ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಕಂಡ ಗ್ರಾಮಸ್ಥರು, ಸಮಯಪ್ರಜ್ಞೆ ಮೆರೆದು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಬಂಧಿತ ಆರೋಪಿಯು ಹೊಸನಗರ ತಾಲೂಕಿನ ಮೂಲದ ಸಂತೋಷ್ ಕುಮಾರ್ ಕೆ.ಆರ್ (43) ಎಂದು ಗುರುತಿಸಲಾಗಿದೆ.

12.21 ಗ್ರಾಂ ಚಿನ್ನದ ವಶ:


ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದಾಗ, ನಾಗರತ್ನ ಅವರ ಮನೆಯಲ್ಲಿ ಕಳ್ಳತನ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಆತನಿಂದ ಒಟ್ಟು 12.21 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಪೊಲೀಸರು ವಶಪಡಿಸಿಕೊಂಡು ಆರೋಪಿಯ ವಿರುದ್ಧ ಬಿ.ಎನ್.ಎಸ್ (BNS) ಕಲಂ 333(1), 331(4) ಹಾಗೂ 305 ರ ಅಡಿಯಲ್ಲಿ ಪ್ರಕರಣ ದಾಖಲಿಸಿ, ಮಾರ್ಚ್ 18 ಬುಧವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ತಿಳಿದು ಬಂದಿದೆ.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t