ಮನೆ ಶಿವಮೊಗ್ಗ ನೀರುಕುದುರೆ ದಾಳಿಯಿಂದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ದುರ್ಮರಣ

ನೀರುಕುದುರೆ ದಾಳಿಯಿಂದ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ ದುರ್ಮರಣ

27
0


ಶಿವಮೊಗ್ಗ: ಶಿವಮೊಗ್ಗದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಲ್ಲಿ ನಡೆದ ದುರ್ಘಟನೆಯಲ್ಲಿ ಯುವ ಪಶುವೈದ್ಯೆ ಡಾ. ಸಮೀಕ್ಷಾ ರೆಡ್ಡಿ (27) ಮೃತಪಟ್ಟಿದ್ದಾರೆ.


ಗರ್ಭಿಣಿ ನೀರುಕುದುರೆಯನ್ನು ಪರೀಕ್ಷಿಸಲು ತೆರಳಿದ್ದ ವೇಳೆ, ಆಕಸ್ಮಿಕವಾಗಿ ನೀರುಕುದುರೆ ದಾಳಿ ನಡೆಸಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಮ್ಯಾಕ್ಸ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮಾ.20 ರಂದು ಬೆಳಿಗ್ಗೆ 6.30ಕ್ಕೆ ಅವರು ನಿಧನರಾದರು.


ಬೆಂಗಳೂರು ಮೂಲದ ಡಾ. ಸಮೀಕ್ಷಾ ರೆಡ್ಡಿ ಪಶುವೈದ್ಯಾಧಿಕಾರಿಯಾಗಿ ಇತ್ತೀಚೆಗೆ ಆಯ್ಕೆಯಾಗಿದ್ದು, ಮೃಗಾಲಯದ ಪಶುವೈದ್ಯರಿಂದ ತರಬೇತಿ ಪಡೆಯುತ್ತಿದ್ದರು. ಮಾ.19 ರಂದು ರಾತ್ರಿ 10.30ರ ಸುಮಾರಿಗೆ ಮೃಗಾಲಯದ ಆಸ್ಪತ್ರೆಗೆ ತೆರಳಿ ಒಂದು ಪಕ್ಷಿಗೆ ಫಾಲೊ-ಅಪ್ ಚಿಕಿತ್ಸೆ ನೀಡಿದ ನಂತರ, ರಾತ್ರಿ 11.45ಕ್ಕೆ ಥರ್ಮಲ್ ಕ್ಯಾಮೆರಾ ಬಳಸಿ ಗರ್ಭಿಣಿ ನೀರುಕುದುರೆಯ ತಾಪಮಾನ ಪರಿಶೀಲಿಸುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.


ಈ ಕುರಿತು ಮಾಹಿತಿ ನೀಡಿದ ಹುಲಿ-ಸಿಂಹಧಾಮದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು, ದಾಳಿ ಆಕಸ್ಮಿಕವಾಗಿದ್ದು, ಮುಂದಿನ ಕ್ರಮಗಳ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t