ಮನೆ ಶಿವಮೊಗ್ಗ ಏಕಾಏಕಿ ಲಾಠಿ ಹಿಡಿದು ರಸ್ತೆಗೆ ಇಳಿದ ಪೊಲೀಸರು..!!

ಏಕಾಏಕಿ ಲಾಠಿ ಹಿಡಿದು ರಸ್ತೆಗೆ ಇಳಿದ ಪೊಲೀಸರು..!!

13
0

✒️..ಅಮಿತ್ ಆರ್ ಆನಂದಪುರ

ಆನಂದಪುರ: ಯುಗಾದಿ ಹಾಗೂ ರಂಜಾನ್ ಹಬ್ಬಗಳ ಪ್ರಯುಕ್ತ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ರೂಟ್ ಮಾರ್ಚ್ ನಡೆಸಲಾಯಿತು.

ಜಿಲ್ಲೆಯ ವಿವಿಧ ಭಾಗಗಳಲ್ಲಿ ಪೊಲೀಸರು ಲಾಠಿ ಹಿಡಿದು ಸಾರ್ವಜನಿಕರಲ್ಲಿ ಭದ್ರತೆ ಬಗ್ಗೆ ವಿಶ್ವಾಸ ಮೂಡಿಸುವ ಜೊತೆಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಈ ರೂಟ್ ಮಾರ್ಚ್ ಕೈಗೊಂಡರು.

ಇದೇ ವೇಳೆ ಆನಂದಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿಯೂ ಸರ್ಕಲ್ ಇನ್ಸ್ಪೆಕ್ಟರ್ ಸಂತೋಷ್ ಶೆಟ್ಟಿ ಹಾಗೂ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರವೀಣ್ ಅವರ ನೇತೃತ್ವದಲ್ಲಿ ಆನಂದಪುರ ಮುಖ್ಯ ರಸ್ತೆಯಲ್ಲಿ ರೂಟ್ ಮಾರ್ಚ್ ನಡೆಯಿತು.

ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t