✒️..ಅಮಿತ್ ಆರ್ ಆನಂದಪುರ
ರಿಪ್ಪನ್ ಪೇಟೆ: ಪಟ್ಟಣದ ಸಮೀಪದ ಕೊಡೂರು ಗ್ರಾಮದ ಕಾಗೆಮರಡು ಬಳಿ ಅಂದರ್-ಬಹರ್ ಇಸ್ಪೀಟು ಜೂಜಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
ಗುರುವಾರ ಗಸ್ತು ತಿರುಗುತ್ತಿದ್ದ ವೇಳೆ, ಶಾಂತಪುರದ ಬಸ್ ನಿಲ್ದಾಣದ ಬಳಿ ಬಂದಾಗ ಕಾಗೆಮರಡು ಬಳಿ ಕೆಲವು ವ್ಯಕ್ತಿಗಳು ಅಕ್ರಮವಾಗಿ ಜೂಜಾಟದಲ್ಲಿ ತೊಡಗಿರುವುದು ಪೊಲೀಸರ ಗಮನಕ್ಕೆ ಬಂದಿದ್ದು, ತಕ್ಷಣ ಕ್ರಮ ಕೈಗೊಂಡ ಪೊಲೀಸ್ ಸಿಬ್ಬಂದಿಗಳಾದ ಉಮೇಶ್ ಹಾಗೂ ರಾಮಚಂದ್ರ ಅವರು ದಾಳಿ ನಡೆಸಿದರು.
ದಾಳಿಯ ವೇಳೆ ಜೂಜಾಟದಲ್ಲಿ ತೊಡಗಿದ್ದವರ ವಿರುದ್ಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಿರಂತರ ಸುದ್ದಿಗಾಗಿ ನಮ್ಮ ಅಮಿತ್ ಟೈಮ್ಸ್ ವಾಟ್ಸಪ್ ಗ್ರೂಪ್ ಅನ್ನು ಸೇರಲು ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡಿ:https://chat.whatsapp.com/CnYYumPSez6AMYyw8cHG9A?mode=ac_t









