✒️..ಅಮಿತ್ ಆರ್ ಆನಂದಪುರ
ಬೆಂಗಳೂರು: 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 23ರಂದು (ನಾಳೆ) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಿಳಿಸಿದೆ.
ಬುಧವಾರ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮಂಡಳಿಯು, ವಿದ್ಯಾರ್ಥಿಗಳು ಮಂಡಳಿಯ ಅಧಿಕೃತ ವೆಬ್‌ಸೈಟ್ https://karresults.nic.in ಮೂಲಕ ಫಲಿತಾಂಶ ವೀಕ್ಷಿಸಬಹುದು ಎಂದು ತಿಳಿಸಿದೆ.
ಕರ್ನಾಟಕ ಒನ್ (KarnatakaOne) ಮೊಬೈಲ್ ಆಪ್ ಮೂಲಕವೂ ಫಲಿತಾಂಶ ಲಭ್ಯವಿರಲಿದೆ. ಇದರೊಂದಿಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಮೊಬೈಲ್ ಸಂಖ್ಯೆಗಳಿಗೆ ವ್ಯಾಟ್ಸಾಪ್ ಅಥವಾ ಎಸ್‌ಎಂಎಸ್ ಮೂಲಕ ಫಲಿತಾಂಶದ ಮಾಹಿತಿಯನ್ನು ರವಾನಿಸಲು ಮಂಡಳಿ ಕ್ರಮ ಕೈಗೊಂಡಿದೆ.

ಡಿಜಿಲಾಕರ್‌ನಲ್ಲಿ ಅಂಕಪಟ್ಟಿ:
ಈ ವರ್ಷದಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಮೊದಲ ಬಾರಿಗೆ ಡಿಜಿಲಾಕರ್ (DigiLocker) ಮೂಲಕ ಅಂಕಪಟ್ಟಿಗಳನ್ನು ವಿತರಿಸಲಾಗುತ್ತಿದೆ. ಏಪ್ರಿಲ್ 23ರ ಮಧ್ಯಾಹ್ನ 12 ಗಂಟೆಯಿಂದ ವಿದ್ಯಾರ್ಥಿಗಳು https://www.digilocker.gov.in ಜಾಲತಾಣ ಬಳಸಿ ತಮ್ಮ ಅಂಕಪಟ್ಟಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.
ಡಿಜಿಲಾಕರ್‌ನಿಂದ ಅಂಕಪಟ್ಟಿ ಪಡೆಯುವ ವಿಧಾನದ ಕುರಿತು ಮಾಹಿತಿ ಪಡೆಯಲು https://tinyurl.com/mw84wmh9 ಲಿಂಕ್‌ನಲ್ಲಿರುವ ವಿಡಿಯೋ ವೀಕ್ಷಿಸಬಹುದು ಎಂದು ಮಂಡಳಿಯ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















