Home Shivamogga ಭಾರತೀಯ ಸೇನೆ ಸೇರ ಬಯಸುವವರಿಗೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ..!!

ಭಾರತೀಯ ಸೇನೆ ಸೇರ ಬಯಸುವವರಿಗೆ ಇಲ್ಲಿದೆ ನೋಡಿ ಉಪಯುಕ್ತ ಮಾಹಿತಿ..!!

49
0

✒️..ಅಮಿತ್ ಆರ್ ಆನಂದಪುರ

ಶಿವಮೊಗ್ಗ, ಏ.22 ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ -1, 2(ಎ), 3(ಎ) ಹಾಗೂ 3(ಬಿ)ಗಳ ಅರ್ಹ ಅಭ್ಯರ್ಥಿಗಳಿಗೆ 2026-27 ನೇ ಸಾಲಿನ ಮೊದಲನೆ ತಂಡ (ಬಾಲಕರಿಗೆ ಮಾತ್ರ)ಕ್ಕಾಗಿ ಆಯ್ಕೆ ಪೂರ್ವ ಸಿದ್ಧತೆ ಬಗ್ಗೆ ಉಚಿತವಾಗಿ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಜಿಲ್ಲೆಯ ಜಿಲ್ಲಾ/ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೊಂದಾಯಿತ ಅಂಚೆಯ ಮೂಲಕ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್, ಮಂಗಳೂರು ತಾಲೂಕು, ದಕ್ಷಿಣ ಕನ್ನಡ ಜಿಲ್ಲೆ -575004 ಇಲ್ಲಿಗೆ ಮೇ-16 ರೊಳಗಾಗಿ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಟ ವಾರ್ಷಿಕ ಆದಾಯ ಮಿತಿ ಪ್ರವರ್ಗ-1ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ. 1 ಲಕ್ಷ ಒಳಗೊಂಡಿರಬೇಕು. ಅಭ್ಯರ್ಥಿಯು 10 ನೇ ತರಗತಿಯನ್ನು ಉತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಟ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು.

ಗ್ರೇಡಿಂಗ್ ಸಿಸ್ಟಂ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು. ಜನ್ಮ ದಿನಾಂಕ ಮತ್ತು ವಯಸ್ಸು 16/05/2026ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಯು 16/05/2006 ರಿಂದ 16/05/2009 ರ ನಡುವಿನ ಅವಧಿಯಲ್ಲಿ ಜನಿಸಿರಬೇಕು. ಅಭ್ಯರ್ಥಿಗಳಿಗೆ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳಿಗೆ ತರಬೇತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ನೀಡಲಾಗುವುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ 8242225078 ಸಂಪರ್ಕಿಸುವುದು .