Home Shivamogga ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ..!!

ಶಿವಮೊಗ್ಗ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆ ..!!

38
0

ಶಿವಮೊಗ್ಗ: ಪ್ರೀತಿ ನಿರಾಕರಣೆಹಾಗೂ ಯುವತಿಯ ಕುಟುಂಬ ದಿಂದ ಹಲ್ಲೆಗೊಳಗಾಗಿ ಮನನೊಂದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮೃತ ಯುವಕನನ್ನು ಶಿಕಾರಿಪುರ ಶಬರೀಶ್ (28) ಎಂದು ಗುರುತಿಸಲಾಗಿದೆ.

ಶಬರೀಶ್ ಅವರು ತೀರ್ಥಹಳ್ಳಿಯಲ್ಲಿ ಟೈಲ್ಸ್ ಕೆಲಸ ಮಾಡುತ್ತಿದ್ದರು. ಅವರು ಯುವತಿ ಯೊಬ್ಬಳನ್ನು ಪ್ರೀತಿಸುತ್ತಿದ್ದು, ಇಬ್ಬರ ಪ್ರೇಮಕ್ಕೆ ಮನೆಯವರ ವಿರೋಧವಿತ್ತು ಎನ್ನಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಯುವತಿಯು ಶಬರೀಶ್‌ ಗೆ ಕರೆ ಮಾಡಿ, ನಾನು ನಿನ್ನ ಬಳಿ ಮಾತನಾಡಬೇಕು, ಶಿವಮೊಗ್ಗದ ಸರ್ಕಾರಿ ಬಸ್ ನಿಲ್ದಾಣಕ್ಕೆ ಬಾ ಎಂದು ಹೇಳಿದ್ದಳು. ಈ ಹಿನ್ನೆಲೆಯಲ್ಲಿ ಶಬರೀಶ್ ಅಲ್ಲಿಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಬಸ್ ನಿಲ್ದಾಣದಲ್ಲಿ ಶಬರೀಶ್ ಮತ್ತು ಯುವತಿಯ ನಡುವೆ ಮಾತಿನ ಚಕಮಕಿ ನಡೆದಿದೆ.

ಈ ವೇಳೆ ಯುವತಿಯು ತನ್ನ ಸಂಬಂಧಿ ಕರೊಂದಿಗೆ ಸೇರಿ ಶಬರೀಶ್ ಮೇಲೆ ಹಲ್ಲೆ ನಡೆಸಿದ್ದಾಳೆ ಎನ್ನಲಾಗಿದೆ. ನಾನು ನಿನ್ನನ್ನು ಮದುವೆಯಾಗು ವುದಿಲ್ಲ ಎಂದು ಖಡಾಖಂಡಿತವಾಗಿ ಹೇಳಿದ್ದಲ್ಲದೆ, ಶಬರೀಶ್ ಮೊಬೈಲ್‌ ನಲ್ಲಿದ್ದ ಫೋಟೋಗಳನ್ನು ಬಲವಂತವಾಗಿಡಿಲೀಟ್ ಮಾಡಿಸಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ನಡೆದ ಅವಮಾನ ಹಾಗೂ ಹಲ್ಲೆಯಿಂದ ತೀವ್ರ ಮನನೊಂದ ಶಬರೀಶ್, ಬಸ್ ನಿಲ್ದಾಣದಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ತಕ್ಷಣ ಅಲ್ಲಿದ್ದವರು ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಏಪ್ರಿಲ್ 22ರ ಮಧ್ಯಾಹ್ನ ಶಬರೀಶ್ ಮೃತಪಟ್ಟಿದ್ದಾನೆ. ಶಿವಮೊಗ್ಗದ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ತನಿಖೆ ಮುಂದುವರಿದಿದೆ.