Home Shivamogga ಶಿವಮೊಗ್ಗದಲ್ಲಿ ಗಾಂಜಾ ಮಾರಾಟ ಜಾಲ ಭೇದಿಸಿದ ಪೊಲೀಸರು – 5 ಆರೋಪಿಗಳು ಬಂಧನ..!!

ಶಿವಮೊಗ್ಗದಲ್ಲಿ ಗಾಂಜಾ ಮಾರಾಟ ಜಾಲ ಭೇದಿಸಿದ ಪೊಲೀಸರು – 5 ಆರೋಪಿಗಳು ಬಂಧನ..!!

41
0

✒️..ಅಮಿತ್ ಆರ್ ಆನಂದಪುರ

ಶಿವಮೊಗ್ಗ, ಏ. 25: ಜಿಲ್ಲೆಯ ಹೊಳೆಹೊನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಾನೂನು ಬಾಹಿರವಾಗಿ ಗಾಂಜಾ ಮಾರಾಟ ನಡೆಸುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ ಐದು ಮಂದಿಯನ್ನು ಬಂಧಿಸಿದ್ದಾರೆ.


ಏಪ್ರಿಲ್ 24ರಂದು ಹೊಳೆಹೊನ್ನೂರುನಿಂದ ಶಿವಮೊಗ್ಗ ಕಡೆಗೆ ಸಾಗುವ ಎನ್‌ಎಚ್–369 ಬೈಪಾಸ್ ರಸ್ತೆಯಲ್ಲಿ ಕೆಲವರು ಗಾಂಜಾ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಹೊಳೆಹೊನ್ನೂರು ಪೊಲೀಸ್ ನಿರೀಕ್ಷಕ ಶಿವಪ್ರಸಾದ್ ಎಂ ಅವರ ನೇತೃತ್ವದಲ್ಲಿ ತಂಡ ದಾಳಿ ನಡೆಸಿತು.


ದಾಳಿಯ ವೇಳೆ ಆರೋಪಿತರಾದ ಲವ್ (24), ಲೇಖಕ್ (20), ಮನೋಜ್ (27), ಕಿರಣ್ (24) ಮತ್ತು ಗಿರೀಶ್ (28) ಅವರನ್ನು ಬಂಧಿಸಲಾಗಿದೆ. ಅವರಿಂದ ಸುಮಾರು ₹2,34,000 ಮೌಲ್ಯದ 4 ಕೆಜಿ 690 ಗ್ರಾಂ ಗಾಂಜಾ ಹಾಗೂ ಕೃತ್ಯಕ್ಕೆ ಬಳಸಿದ ಹೊಂಡಾ ಆಕ್ಟೀವಾ ವಾಹನವನ್ನು ವಶಪಡಿಸಿಕೊಂಡಿದ್ದಾರೆ.


ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಂಖ್ಯೆ 0119/2026 ದಾಖಲಿಸಲಾಗಿದ್ದು, NDPS Act 1985 (U/s 20(b)(ii)(B)) ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ.