Home Blog ಉಚಿತ ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್ ತರಬೇತಿ..!!

ಉಚಿತ ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್ ತರಬೇತಿ..!!

45
0

ಶಿವಮೊಗ್ಗ: ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ತರಬೇತಿ ಸಂಸ್ಥೆಯಲ್ಲಿ 2026 ರ ಮೇ ತಿಂಗಳ ಕೊನೆಯ ವಾರದಲ್ಲಿ ಮೊಬೈಲ್ ಫೋನ್ ರಿಪೇರಿ ಮತ್ತು ಸರ್ವಿಸ್ ತರಬೇತಿ ಆಯೋಜಿಸಲಾಗಿದ್ದು, 18 ರಿಂದ 45 ವರ್ಷ ವಯೋಮಿತಿಯ ಗ್ರಾಮೀಣ ಭಾಗದ ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಮೊಬೈಲ್ ಫೋನ್ ಗಳ ಮೂಲಭೂತ ಜ್ಞಾನ, ಹಾರ್ಡ್ ವೇರ್ ಮತ್ತು ಸಾಪ್ಟರ್ ರಿಪೇರಿ, ದೋಷ ಪತ್ತೆ, ಉಪಕರಣ ಗಳ ಬಳಕೆ, ಗ್ರಾಹಕ ಸೇವಾ ಕೌಶಲ್ಯಗಳು ಮತ್ತು ಸಣ್ಣ ಉದ್ಯಮಆರಂಭಿಸುವ ವಿಧಾನಗಳ ಕುರಿತು ಪ್ರಾಯೋಗಿಕ ತರಬೇತಿ ನೀಡುತ್ತಾರೆ. ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳಿಗೆ ಊಟ ಮತ್ತು ವಸತಿ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ತರಬೇತಿ ಪೂರ್ಣಗೊಂಡ ನಂತರ ಬ್ಯಾಂಕ್ ಗಳ ಮೂಲಕ ಸಾಲ ಸೌಲಭ್ಯ ಮತ್ತು ಮಾರ್ಗದರ್ಶನ ನೀಡಲಾಗುವುದು.

ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ ಮತ್ತು ಮೊಬೈಲ್ ಸಂಖ್ಯೆಯನ್ನು ಸ್ಪಷ್ಟವಾಗಿ ಬರೆದು.

ಅದನ್ನು ಫೋಟೋ ತೆಗೆದು ಮೊಬೈಲ್ ಸಂಖ್ಯೆಗೆ ವಾಟ್ಸಾಪ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದು. ಅಥವಾ ಕರೆ ಮಾಡಿಹೆಸರು ನೋಂದಣಿ ಮಾಡ ಬಹುದು. ಜಾಲತಾಣ ಅರ್ಜಿ ಸಲ್ಲಿಸಬ ಹುದು / CBD RSETI Haliyal ವಾಟ್ಸಾಪ್ ಚಾನಲ್ ನಲ್ಲಿರುವ ಲಿಂಕ್ http://<https://forms/gle/m4pcmprit Devbw. ಮೂಲಕ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ .

ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆಯ ನಿರ್ದೇಶಕರು, ಹಳಿಯಾಳ, ಉತ್ತರ ಕನ್ನಡ ಜಿಲ್ಲೆ, ಮೊ. ಸಂ : 9483485489/8970145354 ಗಳನ್ನು ಸಂಪರ್ಕಿಸಬಹುದು.